ಬೀರೂರು: (ನ್ಯೂಸ್ ಮಲ್ನಾಡ್ ವರದಿ) ಗೈರುಹಾಜರಾದ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಹಾಜರಾಗಲು ಅವಕಾಶ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕಾಲೇಜಿನ ಪ್ರಾಂಶುಪಾಲ ಹಾಗೂ ಪ್ರಥಮ ದರ್ಜೆ ಸಹಾಯಕ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಬೀರೂರಿನ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದಿದೆ. ಪ್ರಥಮ ದರ್ಜೆ ಸಹಾಯಕ ಸದಾಶಿವಯ್ಯ ಹಾಗೂ ಕಾಲೇಜಿನ ಪ್ರಾಂಶುಪಾಲ ಎಮ್. ಕೆ ಪ್ರವೀಣ್ ಕುಮಾರ್ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು.
ಇದನ್ನೂ ಓದಿ; Bigg Boss Kannada:ಬಿಗ್ ಬಾಸ್ ಆರಂಭಕ್ಕೂ ಮೊದಲೇ ಸ್ಪರ್ಧಿಗಳ ಹೆಸರು ರಿವೀಲ್!

ಬೀರೂರು ಪ್ರಥಮ ದರ್ಜೆ ಕಾಲೇಜಿನ ಜೀವಶಾಸ್ತ್ರ ಉಪನ್ಯಾಸಕ ಬಿ.ಟಿ. ಹರೀಶ್ ರವರಿಂದ ಹಣದ ಬೇಡಿಕೆಯನ್ನು ಇಟ್ಟು ಹಣ ಪಡೆದ ಹಿನ್ನೆಲೆಯಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ಪ್ರಥಮ ದರ್ಜೆ ಸಹಾಯಕ ಸದಾಶಿವಯ್ಯ ಫೋನ್ ಪೇ ಮೂಲಕ 10,000 ಪಡೆದಿದ್ದು, ಹಾಗೂ ಪ್ರಾಂಶುಪಾಲ ಎಂ.ಕೆ. ಪ್ರವೀಣ್ ಕುಮಾರ್ 5000 ರೂ ಪಡೆಯುವಾಗ ಸಿಕ್ಕಿಬಿದ್ದಿದ್ದಾರೆ. ಈ ಹಿನ್ನೆಲೆಯಲ್ಲಿ ಇಬ್ಬರನ್ನು ಲೋಕಾಯುಕ್ತ ಪೊಲೀಸರು ಬಂಧಿದ್ದಾರೆ.
ಇದನ್ನೂ ಓದಿ; ಮುಡಾ ಕೇಸ್: ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿ ವಜಾ
ಕಾರ್ಯಚರಣೆಯಲ್ಲಿ ಡಿವೈಎಸ್ಪಿ ತಿರುಮಲೇಶ್, ಬಿ.ಮಲ್ಲಿಕಾರ್ಜುನ್, ಅನಿಲ್ ರಾಥೋಡ್ ಇತರರು ಇದ್ದರು.
ಇದನ್ನೂ ಓದಿ; ರಾಜ್ಯದಲ್ಲಿ ಒನ್ ನೇಷನ್ ಒನ್ ಕಾರ್ಡ್ ಯೋಜನೆ ಜಾರಿ; ಏನಿದು? ಇಲ್ಲಿದೆ ನೋಡಿ












