ಕೊಪ್ಪ: (ನ್ಯೂಸ್ ಮಲ್ನಾಡ್ ವರದಿ) ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಕಂದಕ್ಕೆ ಉರುಳಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹೆಗ್ಗಾರುಕೂಡಿಗೆ ಬಳಿ ನಡೆದಿದೆ.
ಇದನ್ನೂ ಓದಿ: ಪಾನ್ ಕಾರ್ಡ್ ಹೊಂದಿರುವವರ ಗಮನಕ್ಕೆ; ಇಂತಹವರಿಗೆ 10 ಸಾವಿರ ದಂಡ!

ಮಂಗಳೂರಿಗೆ ಕಾಫಿ ತುಂಬಿಕೊಂಡು ಹೋಗುತ್ತಿದ್ದ ಲಾರಿ ಹೆಗ್ಗಾರುಕೂಡಿಗೆ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಸುಮಾರು 40 ಆಳದ ಕಂದಕಕ್ಕೆ ಉರುಳಿದೆ. ಪರಿಣಾಮ ಲಾರಿಯಲ್ಲಿದ್ದ ಕಾಫಿ ಚೀಲಗಳು ಚೆಲ್ಲಾಪಿಲ್ಲಿಯಾಗಿದೆ. ಅದೃಷ್ಟವಶಾತ್ ಲಾರಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದು, ಸಣ್ಣಪುಟ್ಟ ಗಾಯಗೊಂಡಿದ್ದ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ; 15,000 ಸಂಬಳ
ಸ್ಥಳಕ್ಕೆ ಜಯಪುರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.












