ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಪಲ್ಟಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ನಲ್ಲಿ ನಡೆದಿದೆ.
ಇದನ್ನೂ ಓದಿ: ಬಿಪಿಎಲ್ ಕಾರ್ಡುದಾರರಿಗೆ ಬಜೆಟ್‌ನಲ್ಲಿ ಮಹತ್ವದ ಘೋಷಣೆ; ಮಿಸ್ ಮಾಡ್ದೆ ಈ ಸುದ್ದಿ ಓದಿ

ಮಂಗಳೂರಿನಿಂದ ಚಿತ್ರದುರ್ಗಕ್ಕೆ ಸರಕು ಲೋಡ್ ಹೊತ್ತು ಬರುತ್ತಿದ್ದ ಲಾರಿ ಚಾರ್ಮಾಡಿ ಘಾಟ್‌ನ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅಪಘಾತದ ಪರಿಣಾಮ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅಪಘಾತದಿಂದ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದ್ದು, ಬಳಿಕ ಸಂಚಾರವನ್ನು ಸುಗಮಗೊಳಿಸಲಾಗಿದೆ. (ವರದಿ- ತನು ಕೊಟ್ಟಿಗೆಹಾರ)

ಇದನ್ನೂ ಓದಿ: ಅಡಿಕೆ ಬೆಳೆಗಾರರಿಗೆ ಬಜೆಟ್‌ನಲ್ಲಿ ಶುಭ ಸುದ್ದಿ; ಎಲೆ ಚುಕ್ಕಿ, ಹಳದಿ ಎಲೆ ರೋಗ ನಿಯಂತ್ರಣಕ್ಕೆ 10 ಕೋಟಿ ರೂ.
















