ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಅಹಮದಾಬಾದ್ ನಿಂದ ಕೇರಳದತ್ತ ಸಾಗುತ್ತಿದ್ದ ಲಾರಿ ಚಾರ್ಮಾಡಿ ಘಾಟ್ನಲ್ಲಿ ಮಂಗಳವಾರ ಪಲ್ಟಿಯಾದ ಘಟನೆ ನಡೆದಿದೆ. ಈ ಅಪಘಾತದಲ್ಲಿ ಲಾರಿಯಲ್ಲಿದ್ದ ಮೂವರಿಗೆ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಪಾಯದಿಂದ ಪಾರಾಗಿದ್ದಾರೆ.
ಇದನ್ನೂ ಓದಿ: ರೈತರಿಗೆ ಗುಡ್ ನ್ಯೂಸ್!; ಕೃಷಿ ಉಪಕರಣ ಖರೀದಿಗೆ 50% ಸಬ್ಸಿಡಿ

ಚಾರ್ಮಾಡಿ ಘಾಟ್ನ ಎರಡನೇ ತಿರುವಿನಲ್ಲಿ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ವೇಗವಾಗಿ ಇಳಿಜಾರಿನಲ್ಲಿ ಬರುತ್ತಿದ್ದ ಲಾರಿ ತಿರುವಿನಲ್ಲಿ ನಿಯಂತ್ರಣ ಕಳೆದುಕೊಂಡ ಪರಿಣಾಮ ವಾಹನ ರಸ್ತೆ ಬದಿಗೆ ಉರುಳಿದೆ. ಅಪಘಾತದ ವೇಳೆ ಸ್ಥಳೀಯರು ಹಾಗೂ ಪ್ರಯಾಣಿಕರು ತಕ್ಷಣ ನೆರವಿಗೆ ಧಾವಿಸಿ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ. (ವರದಿ- ತನು ಕೊಟ್ಟಿಗೆಹಾರ)
ಇದನ್ನೂ ಓದಿ: ರೈಲ್ವೆ NTPC ಗ್ರಾಜುವೇಟ್ ನೇಮಕಾತಿ; 30,307 ಹುದ್ದೆಗೆ ಅರ್ಜಿ ಆಹ್ವಾನ












