ಹರಿಹರಪುರ: (ನ್ಯೂಸ್ ಮಲ್ನಾಡ್ ವರದಿ) ಬ್ರೇಕ್ ಫೇಲ್ಯೂರ್ ಆಗಿ ಲಾರಿ ಪಲ್ಟಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹರಿಹರಪುರದಲ್ಲಿ ನಡೆದಿದೆ.
ಇದನ್ನೂ ಓದಿ: ಪಿಎಂ-ಕಿಸಾನ್ 21ನೇ ಕಂತು ಬಿಡುಗಡೆ ಮಾಡಿದ ಪ್ರಧಾನಿ ಮೋದಿ: 9 ಕೋಟಿ ರೈತರಿಗೆ ಒಟ್ಟು 18,000 ಕೋಟಿ ರೂ. ಹಣ ಸಂದಾಯ

ಪಡುಬಿದರೆಯಿಂದ ಕೊಪ್ಪದ ಗಡಿಕಲ್ ಗೆ ಹೋಗುತ್ತಿದ್ದ ಗೊಬ್ಬರ ತುಂಬಿದ ಲಾರಿ ಹರಿಹರಪುರ ಸರ್ಕಲ್ ಬಳಿ ಬ್ರೇಕ್ ಫೇಲ್ಯೂರ್ ಆಗಿ ಪಲ್ಟಿ ಹೊಡೆದಿದೆ. ಪರಿಣಾಮ ಪಲ್ಟಿ ಹೊಡೆದ ವೇಳೆ ಸ್ಕೂಟಿ ಮೇಲೆ ಬಿದ್ದಿದ್ದರಿಂದ ಸ್ಕೂಟಿ ಹಾಗೂ ಲಾರಿ ಎರಡು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಲಾರಿಯಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದೆ.
ಹರಿಹರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ: ಆಲದ ಮರದ ನೆರಳಿನಲ್ಲಿ ಶುರುವಾದ ಭಾರತೀಯ ಸ್ಟಾಕ್ ಮಾರ್ಕೆಟ್ – ಇಂದು 400 ಲಕ್ಷ ಕೋಟಿಯ ಮೌಲ್ಯ!












