ತೀರ್ಥಹಳ್ಳಿ: (ನ್ಯೂಸ್ ಮಲ್ನಾಡ್ ವರದಿ) ಸಂಘ ಸಂಸ್ಥೆ ಹಾಗೂ ಖಾಸಗಿ ಫೈನಾನ್ಸ್ ನವರ ಕಿರುಕುಳದಿಂದ ಬೇಸತ್ತ ಲಾರಿ ಮಾಲೀಕರೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ತೀರ್ಥಹಳ್ಳಿಯಲ್ಲಿ ನಡೆದಿದೆ. ಮಂಜುನಾಥ್ ಹೆಚ್.(ಟಿಪ್ಪರ್ ಮಂಜು, 37) ಆತ್ಮಹತ್ಯೆಗೆ ಶರಣಾದ ವ್ಯಕ್ತಿ.
ಇದನ್ನೂ ಓದಿ: ರೈತರಿಗೆ ಗುಡ್ ನ್ಯೂಸ್!; ಕೃಷಿ ಉಪಕರಣ ಖರೀದಿಗೆ 50% ಸಬ್ಸಿಡಿ

ಪಟ್ಟಣದ ಕುರುವಳ್ಳಿ ವಾಸಿಯಾಗಿದ್ದ ಹಾಗೂ ಲಾರಿ ಮಾಲೀಕರಾಗಿದ್ದ ಮಂಜುನಾಥ್ ಹಲವು ಸಂಘ ಸಂಸ್ಥೆಗಳಲ್ಲಿ ಹಾಗೂ ಖಾಸಗಿ ಫೈನಾನ್ಸ್ ಗಳಲ್ಲಿ ಸಾಲ ಮಾಡಿಕೊಂಡಿದ್ದರು. ಸಾಲ ಕೊಟ್ಟವರ ಕಿರುಕುಳದಿಂದ ಬೇಸತ್ತು ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ರೈಲ್ವೆ NTPC ಗ್ರಾಜುವೇಟ್ ನೇಮಕಾತಿ; 30,307 ಹುದ್ದೆಗೆ ಅರ್ಜಿ ಆಹ್ವಾನ












