ಪ್ರೇಮ ವೈಫಲ್ಯ… ಆತ್ಮಹತ್ಯೆಗೆ ಯತ್ನಿಸಿದ ಯುವಕ, ರಕ್ಷಣೆ ಮಾಡಿದ ಪೊಲೀಸರು

ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ಪ್ರೇಮ ವೈಫಲ್ಯದಿಂದ ಮನನೊಂದು ಯುವಕನೊಬ್ಬನು ರೈಲ್ವೆ ಟ್ರ್ಯಾಕ್ ಮೇಲೆ ಮಲಗಿ ಆತ್ಮಹತ್ಯೆ ಯತ್ನಿಸಿದ ವೇಳೆ ಪೊಲೀಸರು ಕಾರ್ಯಾಚರಣೆ ನಡೆಸಿ ಯುವಕನನ್ನ ರಕ್ಷಣೆ ಮಾಡಿರುವ ಘಟನೆ ಭದ್ರಾವತಿ ನಗರದ ಹುತ್ತ ಬಳಿ ಭಾನುವಾರ ನಡೆದಿದೆ.

ಇದನ್ನೂ ಓದಿ: ರೈತರಿಗೆ ಸಿಹಿ ಸುದ್ದಿ ಕೊಟ್ಟ ರಾಜ್ಯ ಸರ್ಕಾರ; ಬೆಂಬಲ ಬೆಲೆ ಯೋಜನೆಯಡಿಯಲ್ಲಿ ವಿವಿಧ ಬೆಳೆಗಳ ಖರೀದಿ ಅವಧಿ ವಿಸ್ತರಣೆ

18 ವರ್ಷದ ದುರಗೇಶ್ ಎಂಬುವನು ಪ್ರೇಮ ವೈಫಲ್ಯದಿಂದ ಮನನೊಂದಿದ್ದ. ಮನನೊಂದ ಹಿನ್ನೆಲೆ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಯತ್ನಿಸಿ ಹಳಿ ಮೇಲೆ ಮಲಗಿದ್ದ. ಈ ವೇಳೆ ಮಾಹಿತಿ ಬಂದ ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು, ಹಳಿಯ ಮೇಲೆ ಮಲಗಿದ್ದ ಯುವಕನನ್ನು ಅಲ್ಲಿಂದ ಮೇಲೆತ್ತಿ ರಕ್ಷಿಸಿದ್ದಾರೆ. ಬಳಿಕ ಆತನನ್ನು ವಿಚಾರಿಸಿದಾಗ, ಪ್ರೇಮ ವೈಫಲ್ಯದ ಕಾರಣದಿಂದ ಮನನೊಂದು ಆತ್ಮಹತ್ಯೆಗೆ ಯತ್ನಿಸಿರುವುದಾಗಿ ತಿಳಿಸಿದ್ದಾನೆ

ಪೊಲೀಸರು ಆ ಯುವಕನಿಗೆ ಪೊಲಿಸರು ಬುದ್ದಿವಾದ ಹೇಳಿ. ಆತನ ಪೋಷಕರನ್ನು ಪೊಲೀಸ್ ಠಾಣೆಗೆ ಕರೆಸಿ, ಯುವಕನನ್ನು ಅವರೊಂದಿಗೆ ಮನೆಗೆ ಕಳುಹಿಸಿಕೊಟ್ಟಿದ್ದಾರೆ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.