ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ಶಿವಮೊಗ್ಗದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲೇ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ (ಜು.17) ನಡೆದಿದೆ.
ರಾಮನಗರದ ಚನ್ನಪಟ್ಟಣ ತಾಲೂಕು ಹೊನ್ನಿಗನಹಳ್ಳಿ ಗ್ರಾಮದ ಮರಿಸ್ವಾಮಿ ಎಚ್.ಎಂ ಎಂಬವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಶೌಚಾಲಯದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಳಿಗ್ಗೆ ಶೌಚಾಲಯ ಕ್ಲೀನಿಂಗ್ ಗೆ ಸಿಬ್ಬಂದಿ ಹೋದಾಗ ಘಟನೆ ಬೆಳಕಿಗೆ ಬಂದಿದೆ. ತನ್ನ ಪ್ಯಾಂಟ್ ಬಳಸಿ, ಶೌಚಾಲಯದ ಕಿಟಕಿಗೆ ನೇಣು ಹಾಕಿಕೊಂಡಿದ್ದರು.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ. ಮೃತದೇಹವನ್ನು ಮೆಗ್ಗಾನ್ ಆಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದೆ.
ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.













