ಬೀರೂರು: ಕೌಟುಂಬಿಕ ಸಮಸ್ಯೆ ಮತ್ತು ಅನಾರೋಗ್ಯದಿಂದ ಬೇಸತ್ತು ವ್ಯಕ್ತಿ ಆತ್ಮಹತ್ಯೆ

ಬೀರೂರು: (ನ್ಯೂಸ್ ಮಲ್ನಾಡ್ ವರದಿ) ಕೌಟುಂಬಿಕ ಸಮಸ್ಯೆ ಮತ್ತು ಅನಾರೋಗ್ಯದಿಂದ ಬೇಸತ್ತು ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀರೂರು ಪಟ್ಟಣದ ಹಾಲಪ್ಪ ಬಡಾವಣೆಯಲ್ಲಿ ನಡೆದಿದೆ. ತರೀಕೆರೆ ತಾಲೂಕು ರಂಗೇನ ಹಳ್ಳಿಯಲ್ಲಿ ವಾಸವಿದ್ದ ಲಕ್ಷ್ಮಣ್‌ (45) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.


ಇದನ್ನೂ ಓದಿ: ಬ್ಯಾಂಕ್ ಆಫ್ ಬರೋಡದಲ್ಲಿ ಜಾಬ್‌ ಆಫರ್; ಆಕರ್ಷಕ ಸಂಬಳ


ಲಕ್ಷ್ಮಣ್ ಬೀರೂರಿನ ಹೊರವಲಯದ ಹೋಟೆಲ್‌ ನಲ್ಲಿ ಅಡುಗೆ ಕೆಲಸ ಮಾಡಿಕೊಂಡಿದ್ದರು. ಮದ್ಯ ವ್ಯಸನಿಯಾಗಿದ್ದ ಲಕ್ಷ್ಮಣ್ ಪತ್ನಿಯನ್ನು ಹಿಂಸಿಸುವುದು, ಮನೆಯ ಸಾಮಗ್ರಿಗಳನ್ನು ಮಾರಾಟ ಮಾಡುವುದರಿಂದ ಬೇಸತ್ತ ಪತ್ನಿ ಇತ್ತೀಚೆಗೆ ಬಿಟ್ಟುಹೋಗಿದ್ದರು. ಲಕ್ಷ್ಮಣ್ ಅವರ ಎಡಗೈ ಮೂಳೆ ಮುರಿದಿದ್ದು ಚಿಕಿತ್ಸೆ ಕೊಡಿಸಿದರೂ ಫಲಕಾರಿಯಾಗದೆ ನೋವು ಮರುಕಳಿಸುತ್ತಿತ್ತು. ಇದರಿಂದ ಬೇಸತ್ತು ಭಾನುವಾರ ವೇಲ್‌ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಬೀರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಇದನ್ನೂ ಓದಿ: ಅತಿವೃಷ್ಟಿಯಿಂದ ಬೆಳೆ ಕಳೆದುಕೊಂಡವರ ಖಾತೆಗೆ ಹಣ ವರ್ಗಾವಣೆ


 

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.