
ಎನ್. ಆರ್. ಪುರ: (ನ್ಯೂಸ್ ಮಲ್ನಾಡ್ ವರದಿ) ನೇಣು ಬಿಗಿದುಕೊಂಡು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್ ಪುರ ತಾಲೂಕಿನ ಕುದುರೆಗುಂಡಿ ಸಮೀಪದ ಕೆರೆಗದ್ದೆಯಲ್ಲಿ ನಡೆದಿದೆ. ಸೃಜನ್ ಹೆಗ್ಡೆ (30) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
ಇದನ್ನೂ ಓದಿ; BPL ಕಾರ್ಡ್ ಹೊಂದಿರುವವರಿಗೆ ಗುಡ್ ನ್ಯೂಸ್; ಈ ತರಬೇತಿಗೆ ಅರ್ಜಿ ಆಹ್ವಾನ

ಇಂದು ಬೆಳಿಗ್ಗೆ 11.30ರ ವೇಳೆಗೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸೃಜನ್ ತುಂಬಾ ಒಳ್ಳೆಯ ವ್ಯಕ್ತಿತ್ವ ಹೊಂದಿದ್ದ ಯುವಕನಾಗಿದ್ದು, ಯಾವುದೇ ದುಶ್ಚಟಗಳನ್ನು ಸಹ ಹೊಂದಿರಲಿಲ್ಲ. ಶೇರು ಮಾರುಕಟ್ಟೆಯಲ್ಲಿ ಹಣ ಕಳೆದುಕೊಂಡ ಪರಿಣಾಮ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎಂದು ಸ್ಥಳೀಯರು ನೋವನ್ನು ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
ಎನ್.ಆರ್ ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ; ಜಿಲ್ಲೆಯ ಗ್ರಾಮ ಪಂಚಾಯಿತಿಯಲ್ಲಿ ಉದ್ಯೋಗ; ಪಿಯುಸಿ ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ













