ತೀರ್ಥಹಳ್ಳಿ: (ನ್ಯೂಸ್ ಮಲ್ನಾಡ್ ವರದಿ) ಟಿಂಬರ್ ನಾಟ ಲೋಡ್ ಮಾಡುವ ವೇಳೆ ನಾಟ ಬಿದ್ದು ಓರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಸೋಮವಾರ ಸಂಜೆ ತೀರ್ಥಹಳ್ಳಿ ತಾಲೂಕಿನ ದೇವಂಗಿ ಬಳಿ ನಡೆದಿದೆ. ಸಕ್ರೆಬೈಲು ನಿವಾಸಿ ಯೋಗೇಶ್ (50) ಮೃತ ವ್ಯಕ್ತಿ.
ಇದನ್ನೂ ಓದಿ: ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲು ಅರ್ಜಿ ಆಹ್ವಾನ

ಯೋಗೇಶ್ ಸೋಮವಾರ ಸಂಜೆ 4 ಗಂಟೆ ಸುಮಾರಿಗೆ ದೇವಂಗಿ ಸಮೀಪ ಟಿಂಬರ್ ನಾಟವನ್ನು ಲೋಡ್ ಮಾಡುವ ಕಾರ್ಯದಲ್ಲಿ ನಿರತರಾಗಿದ್ದರು. ಈ ವೇಳೆ ಆಕಸ್ಮಿಕವಾಗಿ ನಾಟ ಅವರ ಮೇಲೆ ಬಿದ್ದಿದೆ. ತೀವ್ರವಾಗಿ ಗಾಯಗೊಂಡ ಯೋಗೇಶ್ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಈ ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ರೈತರಿಗೆ ಹೊಸ ಪಹಣಿ, ನಕ್ಷೆ ನೀಡಲು ಅಭಿಯಾನ; ಸಚಿವ ಕೃಷ್ಣ ಬೈರೇಗೌಡ ಮಾಹಿತಿ












