ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಮರ ಕೊಯ್ಯುವಾಗ ಮೈ ಮೇಲೆ ಮರ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕು ಗೋಣಿಬೀಡು ಗ್ರಾಮದಲ್ಲಿ ನಡೆದಿದೆ. ಮೃತರನ್ನು ಕೃಷ್ಣಾಪುರ ಗ್ರಾಮದ ಪ್ರಕಾಶ್ (45) ಎಂದು ಗುರುತಿಸಲಾಗಿದೆ.
ಇದನ್ನೂ ಓದಿ: ರೈತರಿಗೆ ಗುಡ್ ನ್ಯೂಸ್!; ಕೃಷಿ ಉಪಕರಣ ಖರೀದಿಗೆ 50% ಸಬ್ಸಿಡಿ

ಟಿಂಬರ್ ಕೆಲಸ ಮಾಡುತ್ತಿದ್ದ ಪ್ರಕಾಶ್, ಬೆಳಿಗ್ಗೆ ಸಹೋದ್ಯೋಗಿಗಳೊಂದಿಗೆ ಸುಮಾರು 70-80 ಅಡಿ ಎತ್ತರದ ಸಿಲ್ವರ್ ಮರವನ್ನು ಕಡಿಯುವ ಕಾರ್ಯದಲ್ಲಿ ನಿರತರಾಗಿದ್ದರು. ಮರ ನೆಲಕ್ಕಿಳಿಯುವ ಸಮಯದಲ್ಲಿ ಕಾರ್ಮಿಕರು ಎಲ್ಲರೂ ಓಡಿ ಹೋಗಿದ್ದಾರೆ. ಆದರೆ ಪ್ರಕಾಶ್ ಓಡುವಾಗ ಕಾಲು ಜಾರಿ ನೆಲಕ್ಕೆ ಬಿದ್ದು, ಕ್ಷಣಾರ್ಧದಲ್ಲಿ ಮೇಲಿಂದ ಬಿದ್ದ ಭಾರೀ ಮರದ ಕೆಳಗೆ ಸಿಲುಕಿದರು. ಮರ ಬಿದ್ದ ರಭಸಕ್ಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ..
ಗೋಣಿಬೀಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ರೈಲ್ವೆ NTPC ಗ್ರಾಜುವೇಟ್ ನೇಮಕಾತಿ; 30,307 ಹುದ್ದೆಗೆ ಅರ್ಜಿ ಆಹ್ವಾನ












