ಎನ್.ಆರ್.ಪುರ: (ನ್ಯೂಸ್ ಮಲ್ನಾಡ್ ವರದಿ) ಗುಂಡಿ ತಪ್ಪಿಸಲು ಹೋಗಿ ಕಾರು ಅಪಘಾತವಾಗಿ ವ್ಯಕ್ತಿ ಓರ್ವರು ಮೃತಪಟ್ಟಿರುವ ಘಟನೆ ಚಿಕ್ಕಮಗಳೂಮರು ಜಿಲ್ಲೆಯ ಎನ್. ಆರ್. ಪುರ ತಾಲೂಕಿನ ಮಡಬೂರು ಬಳಿ ನಡೆದಿದೆ. ಚಂದ್ರಶೇಖರ್ (55) ಮೃತ ದುರ್ದೈವಿ.
ಇದನ್ನೂ ಓದಿ: ಶಾಲಾ ಶಿಕ್ಷಕರು, ಸಿಬ್ಬಂದಿಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್; ಸರ್ಕಾರದ ಈ ಆದೇಶ ನೋಡಿ

ಕಳೆದ ರಾತ್ರಿ ರಸ್ತೆ ಗುಂಡಿ ತಪ್ಪಿಸಲು ಹೋಗಿ ಕಾರು ಡಿಕ್ಕಿಯಾಗಿದ್ದು, ತೀವ್ರ ಗಾಯಗೊಂಡ ಚಂದ್ರಶೇಖರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ರಸ್ತೆಯ ಗುಂಡಿಗೆ ಬಾಳೆ ಗಿಡ ನೆಟ್ಟು ಪ್ರತಿಭಟನೆ:
ರಸ್ತೆಯ ಗುಂಡಿ ತಪ್ಪಿಸಲು ಹೋಗಿ ಮೃತಪಟ್ಟಿರುವ ಹಿನ್ನೆಲೆ ಸ್ಥಳಿಯರು ಸರ್ಕಾರ ಹಾಗೂ ಶಾಸಕರ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದ್ದಾರೆ. ಎನ್. ಆರ್. ಪುರ – ಶಿವಮೊಗ್ಗ ಸಂಪರ್ಕ ಕಲ್ಪಿಸುವ ಮಡಬೂರು ಗ್ರಾಮದ ಬಳಿ ರಸ್ತೆಯು ಗುಂಡಿಗಳಿಂದ ಕೂಡಿದ್ದು, ವಾಹನ ಸಂಚಾರಕ್ಕೆ ತೊಡಕುಂಟಾಗುತ್ತಿದೆ ಎಂದು ಸ್ಥಳೀಯ ಗ್ರಾಮಸ್ಥರು ಇಂದು ರಸ್ತೆಗೆ ಬಾಳೆ ಗಿಡ ನೆಟ್ಟು ಪ್ರತಿಭಟನೆ ನಡೆಸಿದರು.
ಶಾಸಕರಾದ ಟಿ.ಡಿ ರಾಜೇಗೌಡ ಅವರ ನಿರ್ಲಕ್ಷದಿಂದಾಗಿ ಈ ಸಾವಾಗಿದೆ. ಕೂಡಲೇ ರಸ್ತೆ ಗುಂಡಿ ಮುಚ್ಚುವಂತೆ ಶಾಸಕರಿಗೆ ಸ್ಥಳಿಯರು ಆಗ್ರಹಿಸಿದ್ದಾರೆ.
ಇದನ್ನೂ ಓದಿ: 10th ಹಾಗೂ PUC ವಿದ್ಯಾರ್ಥಿಗಳ ಗಮನಕ್ಕೆ; 40,000 ಸ್ಕಾಲರ್ ಶಿಪ್ ಗೆ ಹೀಗೆ ಅರ್ಜಿ ಸಲ್ಲಿಸಿ















