ಕೊಟ್ಟಿಗೆಹಾರ: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿರುವ ಏಕಲವ್ಯ ವಸತಿ ಶಾಲೆಯಲ್ಲಿ 8 ವಿದ್ಯಾರ್ಥಿಗಳ ಮೇಲೆ ಮನಸ್ಸೋ ಇಚ್ಛೆ ಹಲ್ಲೆ ನಡೆಸಿರುವ ಗಂಭೀರ ಆರೋಪ ಕೇಳಿಬಂದಿದೆ.
ಇದನ್ನೂ ಓದಿ: ಈ ಕುಟುಂಬಗಳಿಗೆ ಎಲ್ಪಿಜಿ ಗ್ಯಾಸ್ ಸಿಗಲ್ಲ; ಸರ್ಕಾರದ ಹೊಸ ನಿಯಮ

ಬೆಳಿಗ್ಗೆ ಶಾಲೆಯ ಮೈದಾನದಲ್ಲಿ ಆಟವಾಡುತ್ತಿದ್ದ ವಿದ್ಯಾರ್ಥಿಗಳು ಅನುಮತಿ ಪಡೆಯದೆ ಆಟವಾಡಿದ್ದಾರೆ ಎಂಬ ಕಾರಣಕ್ಕೆ ವಸತಿ ಶಾಲೆಯ ಪ್ರಿನ್ಸಿಪಲ್ ಮತ್ತು ಸಿಬ್ಬಂದಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ವಿದ್ಯಾರ್ಥಿಗಳನ್ನು ಪ್ಲಾಸ್ಟಿಕ್ ಪೈಪ್ ಮತ್ತು ಬೆಲ್ಟ್‌ನಿಂದ ಥಳಿಸಲಾಗಿದ್ದು, ಹಲ್ಲೆ ಮಾಡಿದ ಬಳಿಕ ವಿದ್ಯಾರ್ಥಿಗಳನ್ನು ವಸತಿ ಶಾಲೆಯ ಕೊಠಡಿಯಲ್ಲಿ ಕೂಡಿ ಹಾಕಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ.

ವಿದ್ಯಾರ್ಥಿಗಳ ಕೂಗಾಟವನ್ನು ಕೇಳಿದ ಪಕ್ಕದ ಕಾಫಿ ತೋಟದ ಕಾರ್ಮಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದ ತಕ್ಷಣ ಬಣಕಲ್ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಕೊಠಡಿಯಲ್ಲಿ ಇದ್ದ 8 ವಿದ್ಯಾರ್ಥಿಗಳನ್ನು ರಕ್ಷಿಸಿ ವಿಚಾರಣೆ ನಡೆಸಿದರು. ವಿದ್ಯಾರ್ಥಿಗಳು ನೀಡಿದ ಮಾಹಿತಿಯ ಪ್ರಕಾರ, ಶಾಲೆಯ ಪ್ರಿನ್ಸಿಪಲ್ ಸತೀಶ್ ಮತ್ತು ಸಿಬ್ಬಂದಿ ಶುಭಮ್ ಅವರು ಥಳಿಸಿದ್ದಾರೆ ಎಂದು ಆರೋಪಿಸಲಾಗಿದೆ. ಗಾಯಗೊಂಡ ವಿದ್ಯಾರ್ಥಿಗಳನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. (ವರದಿ- ತನು ಕೊಟ್ಟಿಗೆಹಾರ)
ಇದನ್ನೂ ಓದಿ: LPG ಗ್ರಾಹಕರಿಗೆ ಮಹತ್ವದ ಸೂಚನೆ; ಆಧಾರ್ ಇ ಕೆವೈಸಿ ಮಾಡದಿದ್ರೆ ಸಿಗಲ್ಲ ಸಿಲಿಂಡರ್ !
ಘಟನೆ ಕುರಿತು ವಿದ್ಯಾರ್ಥಿಗಳು ಪೊಲೀಸರಿಗೆ ಸಂಪೂರ್ಣ ಮಾಹಿತಿ ನೀಡಿದ್ದಾರೆ.















