ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ಭಾರತೀ ತೀರ್ಥ ಮಹಾ ಸ್ವಾಮೀಜಿಯವರ 76ನೇ ವರ್ಷದ ವರ್ಧಂತಿ ಮಹೋತ್ಸವದ ಅಂಗವಾಗಿ ಬೃಹತ್ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ ಎಂದು ರಕ್ತದಾನಿಗಳು ಶೃ೦ಗೇರಿ ವಾಟ್ಸಾಪ್ ಗ್ರೂಪ್ ನ ಸದಸ್ಯ ಪ್ರಶಾಂತ್ ತಿಳಿಸಿದ್ದಾರೆ.
ಇದನ್ನೂ ಓದಿ: ಆಸ್ತಿ ನೋಂದಣಿ ನಿಯಮಗಳಲ್ಲಿ ಮಹತ್ವದ ಬದಲಾವಣೆ; ಇನ್ಮುಂದೆ ಆಸ್ತಿ ರಿಜಿಸ್ಟ್ರೇಷನ್ ಗೆ ಈ ದಾಖಲೆಗಳು ಕಡ್ಡಾಯ!

ರಕ್ತದಾನಿಗಳು ಶೃಂಗೇರಿ ವಾಟ್ಸಾಪ್ ಗ್ರೂಪ್, ರೋಟರಿ ಕ್ಲಬ್ ಹಾಗೂ ಶೃಂಗೇರಿ ಅಭಿನವ ವಿದ್ಯಾತೀರ್ಥ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಇವರ ಸಂಯುಕ್ತ ಆಶ್ರಯದಲ್ಲಿ ಈ ಶಿಬಿರ ನಡೆಯಲಿದೆ. ಮಾರ್ಚ್ 28, ಶನಿವಾರ ಬೆಳಿಗ್ಗೆ 9.00ರಿಂದ ಮಧ್ಯಾಹ್ನ 1.30ರವರೆಗೆ ಶಾರದಾ ಕೃಪ, ಶ್ರೀಮಠ, ಶೃಂಗೇರಿ ಇಲ್ಲಿ ಶಿಬಿರ ನಡೆಯಲಿದೆ.

ರಕ್ತದಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.
ಇದನ್ನೂ ಓದಿ: 6 ರಾಶಿಗೆ ಪ್ರಗತಿಯ ಹಾದಿ ತೆರೆಯಲಿದೆ.. ಭರ್ಜರಿ ಲಕ್!
















