
ಕೊಪ್ಪ: (ನ್ಯೂಸ್ ಮಲ್ನಾಡ್ ವರದಿ) ಮಲೆನಾಡಿನ ಅಪೂರ್ವ ಪ್ರಕೃತಿ ಸೌಂದರ್ಯದ ನಡುವೆ ರಾರಾಜಿಸುತ್ತಿರುವ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಪುರಾಣ ಪ್ರಸಿದ್ಧ ಪುಣ್ಯಕ್ಷೇತ್ರಗಳಲ್ಲಿ ಒಂದಾದ, ದಕ್ಷಿಣ ತಿರುಪತಿ ಎಂದೇ ಖ್ಯಾತಿ ಪಡೆದಿರುವ ಮೇಗೂರು ಶ್ರೀ ಲಕ್ಷ್ಮೀ ವೆಂಕಟರಮಣಸ್ವಾಮಿ ದೇವಸ್ಥಾನದ ಮಹಾ ರಥೋತ್ಸವವು ಇದೇ ತಿಂಗಳು ಜನವರಿ 31 ರಿಂದ ಫೆಬ್ರವರಿ 6, 2026 ರವರೆಗೆ ವಿಜೃಂಭಣೆಯಿಂದ ನಡೆಯಲಿದೆ.
ಇದನ್ನೂ ಓದಿ: ರೈತರಿಗೆ ಸಿಹಿ ಸುದ್ದಿ ಕೊಟ್ಟ ರಾಜ್ಯ ಸರ್ಕಾರ; ಬೆಂಬಲ ಬೆಲೆ ಯೋಜನೆಯಡಿಯಲ್ಲಿ ವಿವಿಧ ಬೆಳೆಗಳ ಖರೀದಿ ಅವಧಿ ವಿಸ್ತರಣೆ

ಜಾತ್ರಾ ಮಹೋತ್ಸವದ ಅಂಗವಾಗಿ ಫೆಬ್ರವರಿ 1ರಂದು ದೇವಸ್ಥಾನದ ಭಕ್ತಾದಿಗಳಿಂದ ಹೊರೆಕಾಣಿಕೆ ಸಮರ್ಪಣೆ ಕಾರ್ಯಕ್ರಮ ಜರುಗಲಿದ್ದು, ಫೆಬ್ರವರಿ 4ರಂದು ಭಕ್ತಿಭಾವಪೂರ್ಣವಾಗಿ ಮಹಾ ರಥೋತ್ಸವ ಸಂಪನ್ನಗೊಳ್ಳಲಿದೆ. ಉಳಿದ ದಿನಗಳಲ್ಲಿ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ತಂತ್ರಿಗಳಾದ ವೇ|| ಬ್ರ|| ಶ್ರೀ ಹೆಚ್.ಕೆ. ವಿಶ್ವನಾಥ್ ಭಟ್ (ಮಲ್ಲಂದೂರು) ಅವರ ನೇತೃತ್ವದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಲಿವೆ.

ಜಾತ್ರಾ ಮಹೋತ್ಸವದ ಎಲ್ಲಾ ದಿನಗಳ ಕಾರ್ಯಕ್ರಮಗಳಲ್ಲಿ ಸಮಸ್ತ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವರ ಕೃಪೆಗೆ ಪಾತ್ರರಾಗಬೇಕು ಎಂದು ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ತಲವಾನೆ ಪ್ರಕಾಶ್ ಅವರು ಮನವಿ ಮಾಡಿದ್ದಾರೆ.
ದೇವಸ್ಥಾನಕ್ಕೆ ದೇಣಿಗೆ ಸಲ್ಲಿಸಲು ಇಚ್ಛಿಸುವ ಭಕ್ತಾದಿಗಳು ಕೆಳಕಂಡ ವಿಳಾಸಕ್ಕೆ ಹಣ ಕಳುಹಿಸಿ ಅಧಿಕೃತ ರಶೀದಿ ಪಡೆಯುವಂತೆ ವಿನಂತಿಸಲಾಗಿದೆ:
ಶ್ರೀ ವೆಂಕಟರಮಣಸ್ವಾಮಿ ಸೇವಾ ಟ್ರಸ್ಟ್ (ರಿ)
ಮುನಿವೃಂದಪುರ, ಮೇಗೂರು, ಕೊಪ್ಪ ತಾಲೂಕು
ಕರ್ನಾಟಕ ಬ್ಯಾಂಕ್, ಜಯಪುರ ಶಾಖೆ
S.B. A/C: 362250010100900901
IFSC Code: KARB0000362













