
ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ತಾಲೂಕಿನ ಅರೆನೂರು ಹಾಗೂ ಹಕ್ಕಿಮಕ್ಕಿ ಗ್ರಾಮದಲ್ಲಿ ಎರಡು ಕಾಡುಕೋಣಗಳು ರಸ್ತೆಯಲ್ಲಿ ಪ್ರತ್ಯಕ್ಷವಾಗಿ ಆತಂಕ ಮೂಡಿಸಿವೆ. ಗೂಡ್ಸ್ ವಾಹನಕ್ಕೆ ಅಡ್ಡಲಾಗಿ ಬಂದ ಕಾಡುಕೋಣಗಳನ್ನು ಕಂಡ ಚಾಲಕ ವಾಹನ ನಿಲ್ಲಿಸಿದ್ದಾನೆ. ಬಳಿಕ ಎರಡೂ ಕಾಡುಕೋಣಗಳು ರಸ್ತೆ ದಾಟಿ ತೋಟದೊಳಗೆ ತೆರಳಿವೆ.

ಆಲ್ದೂರು ವಲಯ ಅರಣ್ಯ ವ್ಯಾಪ್ತಿಯಲ್ಲಿ ಎಲ್ಲೆಂದರಲ್ಲಿ ಕಾಡುಕೋಣಗಳು ಕಾಣಿಸಿಕೊಳ್ಳುತ್ತಿರುವುದರಿಂದ ಸ್ಥಳೀಯರು ಆತಂಕಗೊಂಡಿದ್ದಾರೆ. ಕಾಡುಕೋಣಗಳನ್ನು ಸೆರೆಹಿಡಿದು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುವಂತೆ ಗ್ರಾಮಸ್ಥರು ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ.














