ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ತಾಲೂಕಿನ ಮೆಣಸೆ ಅಂಗನವಾಡಿಯಲ್ಲಿ ಮೇಲ್ವಿಚಾರಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಶೈಲಜಾ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಇದನ್ನೂ ಓದಿ: ಗೃಹಲಕ್ಷ್ಮಿಯರಿಗೆ ಮತ್ತೊಂದು ಗುಡ್ ನ್ಯೂಸ್; ಏನದು…?

ಮೆಣಸೆ ಅಂಗನವಾಡಿಯಲ್ಲಿ ಬಹುಪಾಲು ಅವಧಿಯಲ್ಲಿ ಶಿಕ್ಷಕಿಯಾಗಿದ್ದ ಶೈಲಜಾ ರವರು ಅಂಗನವಾಡಿ ಕೆಲಸವನ್ನು ತಮ್ಮ ಮನೆಯ ಕೆಲಸಕ್ಕಿಂತಲೂ ಹೆಚ್ಚು ಶ್ರದ್ದೆಯಿಂದ ನೋಡಿಕೊಂಡಿದ್ದರು. 2 ವರ್ಷದಿಂದ ಕ್ಯಾನ್ಸರ್ ನಿಂದ ಬಳಲಿ ಇತ್ತೀಚೆಗೆ ಚೇತರಿಸಿಕೊಂಡಿದ್ದರು. ಕಳೆದ 5 ತಿಂಗಳಿಂದ ಮತ್ತೆ ಅನಾರೋಗ್ಯಕ್ಕೀಡಾಗಿ ನಿನ್ನೆ ನಿಧನರಾಗಿದ್ದಾರೆ.
ಇದನ್ನೂ ಓದಿ: ಭಾಗ್ಯಲಕ್ಷ್ಮೀ ಫಲಾನುಭವಿಗಳ ಗಮನಕ್ಕೆ; ಪರಿಪಕ್ವ ಮೊತ್ತ ಪಡೆಯಲು ಅರ್ಜಿ ಆಹ್ವಾನ












