ಕಳಸ : (ನ್ಯೂಸ್ ಮಲ್ನಾಡ್ ವರದಿ) ನೀರಿನ ಟ್ಯಾಂಕ್ ಮೀಟರ್ ಬರೆಯುವ ವೇಳೆ ವಿದ್ಯುತ್ ಶಾಕ್ ನಿಂದ ಮೆಸ್ಕಾಂ ಸಿಬ್ಬಂದಿಯೋರ್ವರ ಸ್ಥಿತಿ ಗಂಭೀರವಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಮರಸಣಿಗೆ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ವೆಂಕಟೇಶ್ ವಿದ್ಯುತ್ ಶಾಕ್ ನಿಂದ ಗಂಭೀರಗೊಂಡ ಮೆಸ್ಕಾಂ ಸಿಬ್ಬಂದಿ.
ಇದನ್ನೂ ಓದಿ: ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲು ಅರ್ಜಿ ಆಹ್ವಾನ

ಟ್ಯಾಂಕರ್ ಮೋಟರ್ ಬಳಿ ಗೌಂಡಿಂಗ್ ನಿಂದ ವಿದ್ಯುತ್ ಶಾಕ್ ಹೊಡೆದಿದ್ದು, ಈ ಪರಿಣಾಮ ಗಂಭೀರ ಗಾಯಗೊಂಡ ವೆಂಕಟೇಶ್ ಅವರನ್ನು ಕಳಸ ತಾಲೂಕು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ರವಾನಿಸಲಾಗಿದೆ.
ಕಳಸ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ: ರೈತರಿಗೆ ಹೊಸ ಪಹಣಿ, ನಕ್ಷೆ ನೀಡಲು ಅಭಿಯಾನ; ಸಚಿವ ಕೃಷ್ಣ ಬೈರೇಗೌಡ ಮಾಹಿತಿ












