ಚಿಕ್ಕಮಗಳೂರು ಸೇರಿದಂತೆ ಈ ಎರಡು ಜಿಲ್ಲೆಯಲ್ಲಿ ಮಿನಿ ಏರ್ಪೋರ್ಟ್!

ಪ್ರವಾಸೋದ್ಯಮ, ಕೈಗಾರಿಕೆಗಳ ಅಭಿವೃದ್ಧಿ ಮತ್ತು ನೈಸರ್ಗಿಕ ವಿಕೋಪ ಸಂದರ್ಭದಲ್ಲಿ ಶೀಘ್ರದಲ್ಲಿ ಪ್ರತಿಕ್ರಿಯಿಸುವ ಸಲುವಾಗಿ ವಿಮಾನ ನಿಲ್ದಾಣಗಳು ಇಲ್ಲದಂತಹ ರಾಜ್ಯದ ಜಿಲ್ಲೆಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯು ಏರ್‌ ಸ್ಟ್ರಿಪ್‌ ನಿರ್ಮಾಣಕ್ಕೆ ಮುಂದಾಗಿದೆ.


ಇದನ್ನೂ ಓದಿ: ಕೃಷಿ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ


ಹೌದು, ಚಿಕ್ಕಮಗಳೂರು ಸೇರಿದಂತೆ ಧರ್ಮಸ್ಥಳ, ಕೊಡಗಿನಲ್ಲಿ ಮಿನಿ ವಿಮಾನ ನಿಲ್ದಾಣಕ್ಕೆ ಸರ್ಕಾರ ಮಹತ್ವದ ಯೋಜನೆ ರೂಪಿಸಿದೆ. ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆ ವ್ಯಾಪ್ತಿಯಲ್ಲಿ ಈಗಾಗಲೇ ಅಗತ್ಯ ಭೂಮಿ ಗುರುತಿಸಲಾಗಿದ್ದು, ಧರ್ಮಸ್ಥಳದಲ್ಲಿ ಸೂಕ್ತ ಜಾಗಕ್ಕೆ ಹುಡುಕಾಟ ನಡೆಸಲಾಗುತ್ತಿದೆ.


ಇದನ್ನೂ ಓದಿ: 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ


ಸಾರ್ವಜನಿಕ ವಾಯು ಸೇವೆ ನೀಡುವುದಕ್ಕೆ ಬಳಸದೆ ಖಾಸಗಿ ಅಥವಾ ಸರ್ಕಾರಿ ಕಾರ್ಯದ ವಿಮಾನಗಳ ಇಳಿಸುವಿಕೆ ಮತ್ತು ಹಾರಾಟಕ್ಕೆ ಮಾತ್ರ ಬಳಕೆಯಾಗುವಂತೆ ರಾಜ್ಯದ ಮೂರು ಕಡೆ ಏರ್‌ಸ್ಟ್ರಿಪ್‌ ನಿರ್ಮಾಣ ಮಾಡುವ ಕುರಿತು 2023-24ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಘೋಷಿಸಲಾಗಿತ್ತು.


ಇದನ್ನೂ ಓದಿ: ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?


 

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.