ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಅಪ್ರಾಪ್ತ ಬಾಲಕ ಸಾವು

ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ಸ್ನೇಹಿತರೊಂದಿಗೆ ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಅಪ್ರಾಪ್ತ ಬಾಲಕನೋರ್ವ ಈಜು ಬಾರದೆ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಕುರುಬರ ಪಾಳ್ಯ ಸ್ಮಶಾನದ ಹಿಂಭಾಗದ ನದಿ ತೀರದಲ್ಲಿ ನಡೆದಿದೆ.

ಮೃತಪಟ್ಟ ಬಾಲಕ ತನ್ನ 4-5 ಜನ ಸ್ನೇಹಿತರ ಗುಂಪಿನೊಂದಿಗೆ ತುಂಗಾ ನದಿಗೆ ಈಜಲು ಹೋಗಿದ್ದ. ಈ ವೇಳೆ ಈಜು ಬಾರದ ಕಾರಣ, ಆತ ನೀರಿನಲ್ಲಿ ಮುಳುಗಿದ್ದಾನೆ. ಬಾಲಕ ನೀರಿನಲ್ಲಿ ಮುಳುಗುತ್ತಿರುವುದನ್ನು ಕಂಡು ಜೊತೆಯಲ್ಲಿದ್ದವರು ಗಾಬರಿಗೊಂಡಿದ್ದಾರೆ.

ವಿಷಯ ತಿಳಿದ ತಕ್ಷಣ ಸ್ಥಳೀಯ ಮೀನುಗಾರರು ನದಿಗೆ ಇಳಿದು, ಯುವಕನನ್ನು ನೀರಿನಿಂದ ಮೇಲಕ್ಕೆತ್ತಿದ್ದಾರೆ. ಆದರೆ ಅಷ್ಟರಲ್ಲಿ ಆತ ಸಾವನ್ನಪ್ಪಿದ್ದ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.