ಕೊಟ್ಟಿಗೆಹಾರ: (ನ್ಯೂಸ್ ಮಲ್ನಾಡ್ ವರದಿ) ಮೂಡಿಗೆರೆ ತಾಲೂಕಿನ ಬಾಳೂರು ಗ್ರಾಮದಲ್ಲಿ ಅಪ್ರಾಪ್ತ ಬಾಲಕನಿಗೆ ದ್ವಿಚಕ್ರ ವಾಹನ ಚಲಾಯಿಸಲು ಅವಕಾಶ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಾಲಕನ ತಂದೆಯ ವಿರುದ್ಧ ನ್ಯಾಯಾಲಯವು ರೂ.25,000 ದಂಡ ವಿಧಿಸಿದೆ.
ಇದನ್ನೂ ಓದಿ: ಚಿಕ್ಕಮಗಳೂರು ಜಿಲ್ಲೆಯಲ್ಲಿ 12,991 BPL ಕಾರ್ಡ್ ರದ್ದು; ನಿಮ್ಮ ತಾಲೂಕಿನ ರೇಷನ್ ಕಾರ್ಡ್ ಡಿಲೀಟ್ ಆದ ಡಿಟೈಲ್ಸ್ ಇಲ್ಲಿದೆʼ

ಬಾಳೂರು ಪೊಲೀಸ್ ಠಾಣೆಯ ಪಿಎಸ್ಐ ದಿಲೀಪ್ ಕುಮಾರ್ ಅವರು ಈ ಸಂಬಂಧ ಪ್ರಕರಣ ದಾಖಲಿಸಿದ್ದರು. ಪ್ರಕರಣವು ಮೂಡಿಗೆರೆ ಸಿವಿಲ್ ನ್ಯಾಯಾಧೀಶರು ಹಾಗೂ ಜೆಎಂಎಫ್‌ಸಿ ನ್ಯಾಯಾಲಯದ ಮುಂದೆ ವಿಚಾರಣೆಗೆ ಬಂದಿದ್ದು, ಅಪ್ರಾಪ್ತನಿಗೆ ಬೈಕ್ ನೀಡಿದ್ದಕ್ಕೆ ಹೊಣೆಗಾರರಾಗಿರುವ ತಂದೆ ಶಂಕರ ಅವರ ಹೆಸರಿನಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ದಂಡ ವಿಧಿಸಲಾಗಿದೆ.
ದಂಡದ ಮೊತ್ತವನ್ನು ಡಿಸೆಂಬರ್ 29ರಂದು ಸರ್ಕಾರದ ಖಾತೆಗೆ ಜಮಾ ಮಾಡಲಾಗಿದ್ದು, ಈ ಕುರಿತು ನ್ಯಾಯಾಲಯದಿಂದ ಫಾರ್ಮ್–Q ರಸೀದಿ ನೀಡಲಾಗಿದೆ ಎಂದು ನ್ಯಾಯಾಲಯದ ಮೂಲಗಳು ತಿಳಿಸಿವೆ.
ಇದನ್ನೂ ಓದಿ: ಮೊಟ್ಟೆ ತಿಂದ್ರೆ ಕ್ಯಾನ್ಸರ್ ಬರುತ್ತಾ?; FSSAI ವರದಿ ಇಲ್ಲಿದೆ ನೋಡಿ
ಅಪ್ರಾಪ್ತ ಮಕ್ಕಳ ಸುರಕ್ಷತೆ ಹಾಗೂ ರಸ್ತೆ ಸಂಚಾರ ನಿಯಮಗಳ ಕಟ್ಟುನಿಟ್ಟಿನ ಪಾಲನೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ತೀರ್ಪು ಮಹತ್ವ ಪಡೆದಿದೆ. (ವರದಿ- ತನು ಕೊಟ್ಟಿಗೆಹಾರ)












