ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಅಪ್ರಾಪ್ತ ಬಾಲಕನಿಗೆ ಬೈಕ್ ಚಾಲನೆ ಮಾಡಲು ಅವಕಾಶ ನೀಡಿದ್ದ ವ್ಯಕ್ತಿಗೆ ನ್ಯಾಯಾಲಯ ರೂ.25,000 ದಂಡ ವಿಧಿಸಿದೆ.
ಇದನ್ನೂ ಓದಿ: ಏರ್ಟೆಲ್, ಜಿಯೋ ರೀಚಾರ್ಜ್ ಯೋಜನೆ ಬೆಲೆ ಹೆಚ್ಚಳ?; ಜನಪ್ರಿಯ ಯೋಜನೆಗಳು ಸಹ ದುಬಾರಿ

ಅಪ್ರಾಪ್ತ ಮಕ್ಕಳಿಗೆ ಬೈಕ್ ಕೊಡುವ ಪೋಷಕರು ಎಚ್ಚರ ವಹಿಸಬೇಕು. ಇಲ್ಲವಾದಲ್ಲಿ ಭಾರಿ ದಂಡ ಕಟ್ಟಬೇಕಾಗುತ್ತದೆ. ಅಪ್ರಾಪ್ತ ಬಾಲಕನಿಗೆ ಬೈಕ್ ಚಾಲನೆ ಮಾಡಲು ನೀಡಿದ್ದ ವ್ಯಕ್ತಿಯ ವಿರುದ್ಧ 2024 ರಲ್ಲಿ ಚಿಕ್ಕಮಗಳೂರು ಸಂಚಾರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಘನ 1 ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು & JMFC ನ್ಯಾಯಾಲಯ, ಚಿಕ್ಕಮಗಳೂರು ರೂ.25,000/- ದಂಡ ವಿಧಿಸಿ ಆದೇಶ ಹೊರಡಿಸಿದೆ.
ಇದನ್ನೂ ಓದಿ: ಪರೀಕ್ಷಾ ಪೇ ಚರ್ಚಾ ನೋಂದಣಿ ಪ್ರಾರಂಭ; ಏನಿದು ಪರೀಕ್ಷಾ ಪೇ ಚರ್ಚಾ












