ಶೃಂಗೇರಿ ರಾಜಕೀಯ ಕದನದಲ್ಲಿ ಹೈಕೋರ್ಟ್ ನೀಡಿದ ಬಿಗ್ ಟ್ವಿಸ್ಟ್! – ಶಾಸಕ ಟಿ. ಡಿ. ರಾಜೇಗೌಡಗೆ 2 ವಾರಗಳ ಗಡುವು

ಶೃಂಗೇರಿ:  (ನ್ಯೂಸ್ ಮಲ್ನಾಡ್ ವರದಿ) 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಶೃಂಗೇರಿ ಕ್ಷೇತ್ರದಲ್ಲಿ ನಡೆದಿದ್ದ ಜಿದ್ದಾಜಿದ್ದಿನ ಹಣಾಹಣಿಯು ಈಗ ಮತ್ತೆ ನ್ಯಾಯಾಲಯದ ಆದೇಶದ ಮೂಲಕ ಮುನ್ನೆಲೆಗೆ ಬಂದಿದೆ. ಅಂದು ನಡೆದಿದ್ದ ಅಂಚೆ ಮತದಾನದಲ್ಲಿ ತಿರಸ್ಕೃತಗೊಂಡಿದ್ದ 279 ಮತಗಳನ್ನು ಮರುಪರಿಶೀಲಿಸುವಂತೆ ರಾಜ್ಯ ಉಚ್ಛ ನ್ಯಾಯಾಲಯವು ಮಹತ್ವದ ತೀರ್ಪು ನೀಡಿದೆ.


ನ್ನೂ ಓದಿ: ಆಸ್ತಿ ನೋಂದಣಿ ನಿಯಮಗಳಲ್ಲಿ ಮಹತ್ವದ ಬದಲಾವಣೆ; ಇನ್ಮುಂದೆ ಆಸ್ತಿ ರಿಜಿಸ್ಟ್ರೇಷನ್ ಗೆ ಈ ದಾಖಲೆಗಳು ಕಡ್ಡಾಯ!


ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಟಿ.ಡಿ. ರಾಜೇಗೌಡ ಬಿಜೆಪಿಯ ಡಿ.ಎನ್. ಜೀವರಾಜ್ ಅವರ ವಿರುದ್ಧ ಕೇವಲ 201 ಮತಗಳ ಅಂತರದಿಂದ ಜಯಗಳಿಸಿದ್ದರು. ಈ ಎಣಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಜೀವರಾಜ್ ಅವರು ನ್ಯಾಯಾಲಯದ ಮೆಟ್ಟಿಲೇರಿದ್ದರು. ಈ ಕುರಿತು ವಿಚಾರಣೆ ನಡೆಸಿದ ಹೈಕೋರ್ಟ್, ಒಟ್ಟು ಚಲಾವಣೆಯಾದ 2101 ಅಂಚೆ ಮತಗಳಲ್ಲಿ ತಿರಸ್ಕೃತಗೊಂಡಿದ್ದ ಮತಗಳ ಪರಾಮರ್ಶೆಗೆ ಸೂಚನೆ ನೀಡಿದೆ.


ನ್ನೂ ಓದಿ: 6 ರಾಶಿಗೆ ಪ್ರಗತಿಯ ಹಾದಿ ತೆರೆಯಲಿದೆ.. ಭರ್ಜರಿ ಲಕ್‌!


ಈ ಪ್ರಕ್ರಿಯೆಯನ್ನು ಕೈಗೆತ್ತಿಕೊಳ್ಳಲು ಕೇಂದ್ರ, ರಾಜ್ಯ ಮತ್ತು ಜಿಲ್ಲಾ ಚುನಾವಣಾ ಪ್ರಾಧಿಕಾರಗಳಿಗೆ ಎರಡು ವಾರಗಳ ಕಾಲಾವಕಾಶ ನೀಡಲಾಗಿದೆ. ಆದಾಗ್ಯೂ, ಈ ತೀರ್ಪಿಗೆ ಎರಡು ವಾರಗಳ ತಡೆಯಾಜ್ಞೆಯನ್ನೂ ನೀಡಲಾಗಿದ್ದು, ಮೇಲ್ಮನವಿ ಸಲ್ಲಿಸಲು ಟಿ.ಡಿ. ರಾಜೇಗೌಡರ ಪರ ವಕೀಲರಿಗೆ ಕಾಲಾವಕಾಶ ಕಲ್ಪಿಸಲಾಗಿದೆ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.