ಎನ್. ಆರ್. ಪುರ: 30 ವರ್ಷದ ಯುವಕನಿಗೆ ಮಂಗನ ಕಾಯಿಲೆ ಪತ್ತೆ

ಎನ್. ಆರ್. ಪುರ: (ನ್ಯೂಸ್‌ ಮಲ್ನಾಡ್‌ ವರದಿ) ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಆಡುವಳ್ಳಿ ಗ್ರಾಮದಲ್ಲಿ 30 ವರ್ಷದ ಯುವಕನೊಬ್ಬನಿಗೆ ಮಂಗನ ಕಾಯಿಲೆ ಇರುವುದು ದೃಡಪಟ್ಟಿದ್ದು ತಾಲೂಕಿನಲ್ಲಿ ಈ ವರ್ಷದ ಪ್ರಥಮ ಮಂಗನ ಕಾಯಿಲೆಯ ಪ್ರಕರಣ ದಾಖಲಾಗಿದೆ.


ಇದನ್ನೂ ಓದಿ: ರೈತರಿಗೆ ಸಿಹಿ ಸುದ್ದಿ; ಸೋಲಾರ್ ಪಂಪ್ ಸೆಟ್‌ಗಳಿಗೆ ಅರ್ಜಿ ಆಹ್ವಾನ


ಡಿಸೆಂಬರ್ 25 ರಂದು ಯುವಕನಿಗೆ ಜ್ವರ ಕಾಣಿಸಿಕೊಂಡಿತ್ತು. ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡು ಹೆಚ್ಚಿನ ಚಿಕಿತ್ಸೆಗೆ ಡಿಸೆಂಬರ್ 30 ರಂದು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದನು. ಜನವರಿ 1 ರಂದು ಮಂಗನ ಕಾಯಿಲೆ ಇರುವುದು ಪರೀಕ್ಷೆಯಿಂದ ದೃಡಪಟ್ಟಿದೆ. ಮಣಿಪಾಲ ಆಸ್ಪತ್ರೆಯಲ್ಲಿ ಮಂಗನ ಕಾಯಿಲೆಗೆ ಉಚಿತ ಚಿಕಿತ್ಸೆ ಇರುವುದರಿಂದ ಜನವರಿ 2 ರಂದು ಮಣಿಪಾಲ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗಿತ್ತು. ಯುವಕನಿಗೆ ಈಗ ಸಂಪೂರ್ಣ ಗುಣವಾಗಿದ್ದು ಚಿಕಿತ್ಸೆ ಪಡೆದು ಮನೆಗೆ ವಾಪಾಸಾಗಿದ್ದಾನೆ ಎಂದು ಆರೋಗ್ಯ ಇಲಾಖೆಯವರು ತಿಳಿಸಿದ್ದಾರೆ.

ಮಂಗನ ಕಾಯಿಲೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಡುವಳ್ಳಿ ಗ್ರಾಮದ ಎಲ್ಲಾ ಮನೆಗಳಿಗೂ ಉಣ್ಣೆ ನಿವಾರಕ ಡೆಫಾ ತೈಲವನ್ನು ನೀಡಲಾಗಿದೆ ಎಂದು ಕಟ್ಟಿನಮನೆ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ವಿನಯ್ ತಿಳಿಸಿದ್ದಾರೆ.


ಇದನ್ನೂ ಓದಿ: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಸರ್ಕಾರ ಆದೇಶ


ಹತ್ತಿರದ ಶಾಲೆಗಳಿಗೆ ಆರೋಗ್ಯ ಇಲಾಖೆಯ ವೈದ್ಯರು ಹಾಗೂ ಸಿಬ್ಬಂದಿಗಳು ತೆರಳಿ ಮಂಗನ ಕಾಯಿಲೆ ಬಗ್ಗೆ ಅರಿವು ಮೂಡಿಸಲಾಗಿದೆ. ಜನವರಿ 2 ರಂದು ಗಡಿಗೇಶ್ವರ ಪ್ರೌಢ ಶಾಲೆ ಹಾಗೂ ಆಡುವಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಪೂರ್ವ ಭಾವಿ ಸಭೆ ನಡೆಸಲಾಗಿದೆ. ಶೀಘ್ರದಲ್ಲೇ ಆಡುವಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಸಭೆ ಕರೆದು ಟಾಸ್ಕ್ ಪೋರ್ಸ ಸಮಿತಿ ರಚನೆ ಬಗ್ಗೆ ಚರ್ಚೆ ನಡೆಸಲಾಗುವುದು. ಆಡುವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಯಾರಿಗಾದರೂ ಜ್ವರ ಕಾಣಿಸಿಕೊಂಡರೆ ತಕ್ಷಣ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ರಕ್ತ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.

ಇನ್ನು ಎನ್.ಆರ್.ಪುರ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಮುಂಜಾಗ್ರತಾ ಕ್ರಮವಾಗಿ 10 ಹಾಸಿಗೆಯ ಕೆ.ಎಫ್.ಡಿ.ವಾರ್ಡ್ ತೆರೆಯಲಾಗಿದೆ ಎಂದು ವಿವರಿಸಿದ್ದಾರೆ. (ವರದಿ- ಗುರು ಎಮ್.‌ ಸಿ)


ಇದನ್ನೂ ಓದಿ: ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಯೋಜನೆ ಜಾರಿ


 

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.