ಮೂಡಿಗೆರೆ; (ನ್ಯೂಸ್ ಮಲ್ನಾಡ್ ವರದಿ) ಎರಡು ಸಾರಿಗೆ ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ 20 ಕ್ಕೂ ಅಧಿಕ ಮಂದಿಗೆ ಗಾಯಗಳಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಸಮೀಪದ ಘಟ್ಟದ ಹಳ್ಳಿಯಲ್ಲಿ ಇಂದು ಮಧ್ಯಾಹ್ನ ಸುಮಾರು ಒಂದು ಗಂಟೆಯ ವೇಳೆಗೆ ಈ ಅಪಘಾತ ನಡೆದಿದೆ.


ಮೂಡಿಗೆರೆಯಿಂದ ಬೇಲೂರಿಗೆ ಹೋಗುತ್ತಿದ್ದ ಸಾರಿಗೆ ಬಸ್ ಮತ್ತು ಬೇಲೂರಿನಿಂದ ಮೂಡಿಗೆರೆಗೆ ಬರುತ್ತಿದ್ದ ಸಾರಿಗೆ ಬಸ್ ಗಳ ನಡುವೆ ಘಟ್ಟದಹಳ್ಳಿ ಸಮೀಪ ಮುಖಾಮುಖಿ ಡಿಕ್ಕಿಯಾಗಿದೆ. ಎರಡು ಬಸ್ ಗಳಲ್ಲಿ ಪ್ರಯಾಣಿಸುತ್ತಿದ್ದ ಸುಮಾರು 20 ಕ್ಕೂ ಅಧಿಕ ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಅವರಲ್ಲಿ ಕೆಲವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ; ಆಧಾರ್ ಕಾರ್ಡ್ ಅಪ್ಡೇಟ್ ಗೆ ಕೆಲವೇ ದಿನ ಬಾಕಿ; ಹೇಗೆ ಅಪ್ ಡೇಟ್ ಮಾಡುವುದು?
ಸ್ಥಳೀಯರು ಮತ್ತು ಆಂಬುಲೆನ್ಸ್ ಚಾಲಕರ ಸಹಾಯದಿಂದ ಗಾಯಾಳುಗಳನ್ನು ಮೂಡಿಗೆರೆ ಎಂಜಿಎಂ ಆಸ್ಪತ್ರೆಗೆ ಸಾಗಿಸಲಾಗಿದೆ. ಇದರಲ್ಲಿ ಕೆಲವರಿಗೆ ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದು ಅವರನ್ನು ಬೇರೆಡೆಗೆ ಚಿಕಿತ್ಸೆಗೆ ಕರೆದೊಯ್ಯುವ ಸಾಧ್ಯತೆ ಇದೆ ಎನ್ನಲಾಗಿದೆ. (ವರದಿ- ತನು ಕೊಟ್ಟಿಗೆಹಾರ)

ಜಯಪುರ: ಸ್ಪಂದನ ಸಂಸ್ಥೆಯ ವತಿಯಿಂದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪರಿಕರಗಳ ವಿತರಣೆ
ಜಯಪುರ: (ನ್ಯೂಸ್ ಮಲ್ನಾಡ್ ವರದಿ) ಕುಟುಂಬದ ಆರ್ಥಿಕ ಸಮಸ್ಯೆಯ ಕಾರಣಕ್ಕಾಗಿ ಗುಣ ಮಟ್ಟದ ಶಿಕ್ಷಣದಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ವಂಚಿತರಾಗಬಾರದು ಎನ್ನುವ ಉದ್ದೇಶದಿಂದ ಸ್ಪಂದನ ಸಂಸ್ಥೆ, ಶಾಲೆಯ ಮಕ್ಕಳಿಗೆ ಶೈಕ್ಷಣಿಕ ಪರಿಕರಗಳನ್ನು ನೀಡುತ್ತಿದ್ದು, ಇವುಗಳನ್ನು ಸದುಪಯೋಗಿಸಿಕೊಂಡು ಉತ್ತಮ ಅಂಕಗಳಿಸಬೇಕು ಎಂದು ಸ್ಪಂದನ ಸಂಸ್ಥೆಯ ಅದ್ಯಕ್ಷ ಕಿಬ್ಳಿ ಪ್ರಸನ್ನ ಕುಮಾರ್ ಹೇಳಿದರು.
ಇದನ್ನೂ ಓದಿ; ಏರ್ ಇಂಡಿಯಾದಲ್ಲಿ 828 ಹುದ್ದೆಗಳು ಖಾಲಿ; ನೇರ ಸಂದರ್ಶನ ಮೂಲಕ ಆಯ್ಕೆ
ಶಾಲೆಯ ಮುಖ್ಯ ಶಿಕ್ಷಕಿ ಹುರ್ಮತ್ ಉನ್ನೀಸಾ ಮಾತನಾಡಿ, ಶಾಲೆಗೆ ಬರುವವರು ಬಹುತೇಕ ಬಡ ವಿದ್ಯಾರ್ಥಿಗಳು. ಕುಗ್ರಾಮದಲ್ಲಿರುವ ನಮ್ಮ ಶಾಲೆಯನ್ನು ಗುರುತಿಸಿ ಶೈಕ್ಷಣಿಕ ಪರಿಕರಗಳನ್ನು ನೀಡುತ್ತಿರುವುದಕ್ಕೆ ಸಂಸ್ಥೆಗೆ ಅಭಿನಂದನೆ ಸಲ್ಲಿಸುತ್ತಾವಿದ್ಯಾರ್ಥಿಗಳು ಈ ಬಾರಿ ಉತ್ತಮ ಅಂಕಗಳನ್ನು ಪಡೆಯುವತ್ತ ಗಮನ ಹರಿಸಬೇಕು ಹಾಗಾದಾಗ ಮಾತ್ರ ಸ್ಪಂದನ ಸಂಸ್ಥೆಯ ಕಾರ್ಯಕ್ಕೆ ಬೆಲೆ ಸಿಗುತ್ತದೆ ಎಂದರು.
ಇದನ್ನೂ ಓದಿ; ಚಿನ್ನದ ಬೆಲೆ ಏರಿಕೆ, ಬೆಳ್ಳಿ ತುಸು ಅಗ್ಗ; ಇಲ್ಲಿದೆ ಇವತ್ತಿನ ದರಪಟ್ಟಿ
ಕಾರ್ಯಕ್ರಮದಲ್ಲಿ ಸ್ಪಂದನ ಸಂಸ್ಥೆಯ ಸದಸ್ಯೆ ಡಾ. ಯಶಸ್ವಿನಿ ಕೃಷ್ಣ ಪ್ರಸಾದ್, ಜೇಸಿಐ ಬಿಳಾಲುಕೊಪ್ಪದ ಪೂರ್ವಾದ್ಯಕ್ಷ ಅರುಣ್ ಕುಮಾರ್, ಸಾಮಾಜಿಕ ಕಾರ್ಯಕರ್ತ ಸಂತೋಷ್ ಮೇಗೂರು ಹಾಗೂ ವಿದ್ಯಾರ್ಥಿಗಳು ಅದ್ಯಾಪಕರಿದ್ದರು.












