ಮೂಡಿಗೆರೆ; ಪದವಿ ಕಾಲೇಜು ಉಪನ್ಯಾಸಕ ವಿರುದ್ಧ ದೂರು

ಮೂಡಿಗೆರೆ; (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಡಿ.ಎಸ್.ಬಿ.ಜಿ. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕ ನೌಶಾದ್ ಎಂಬುವವರ ವಿರುದ್ಧ ಕಾಲೇಜಿನ ಹಳೇವಿದ್ಯಾರ್ಥಿಗಳು ಕೋಮು ಪ್ರಚೋದನಕಾರಿ ಭಾವನೆ ಬಿತ್ತುತ್ತಿದ್ದಾರೆ ಎಂದು ಆರೋಪಿಸಿ ಕುವೆಂಪು ವಿಶ್ವವಿದ್ಯಾಲಯದ ಜಂಟಿ ನಿರ್ದೇಶಕರಿಗೆ ದೂರು ಸಲ್ಲಿಸಿದ್ದಾರೆ.

 

ಇದನ್ನೂ ಓದಿ; ಗ್ಯಾಸ್ ಸಿಲಿಂಡರ್ ಬೆಲೆ ಇಳಿಕೆ; ಈಗೆಷ್ಟಿದೆ ಗ್ಯಾಸ್ ಬೆಲೆ?

ಸರ್ಕಾರದ ಯೋಜನೆಗಳಾದ ಅಗ್ನಿಪಥ್ ಮತ್ತು ದೇಶದ ಪ್ರಧಾನಿಗಳ ಬಗ್ಗೆ ಮತ್ತು ಸರ್ಕಾರದ ಕಾರ್ಯಕ್ರಮಗಳ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುತ್ತಾರೆ. ಕಾಲೇಜು ಸಿಬ್ಬಂದಿ ಮತ್ತು ವಿದ್ಯಾರ್ಥಿಗಳ ಜೊತೆ ಅನುಚಿತವಾಗಿ ವರ್ತಿಸುತ್ತಾರೆ. ಸಾಮಾಜಿಕ ಜಾಲತಾಣಗಳಲ್ಲಿ ಕೋಮುಭಾವನೆ ಕೆರಳಿಸುವಂತಹ ಪೋಸ್ಟ್ ಗಳನ್ನು ಹಾಕುತ್ತಾರೆ. ತನಗೆ ರಾಜಕೀಯ ನಾಯಕರ ಪ್ರಭಾವವಿದೆ ಎಂದು ಸಹ ಉಪನ್ಯಾಸಕರನ್ನು ಬೆದರಿಸುತ್ತಿರುವ ಬಗ್ಗೆ ದೂರುಗಳು ಕೇಳಿಬರುತ್ತಿವೆ. ಹಿಂದುಗಳು ಮತ್ತು ರಾಷ್ಟ್ರದ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದು, ಇವುಗಳ ಬಗ್ಗೆ ಸೈಬರ್ ಕ್ರೈಂ ಮೂಲಕ ತನಿಖೆ ನಡೆಸಿ ಕಾನೂನು ಕ್ರಮ ಜರುಗಿಸಬೇಕು. ಇವರ ವಿರುದ್ಧ ಸೂಕ್ತ ಶಿಸ್ತು ಕ್ರಮ ಕೈಗೊಳ್ಳಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಹಳೇವಿದ್ಯಾರ್ಥಿಗಳು ಜಂಟಿ ನಿರ್ದೇಶಕರಿಗೆ ದೂರಿನಲ್ಲಿ ತಿಳಿಸಿದ್ದಾರೆ.

 

ಇದನ್ನೂ ಓದಿ; ಉದ್ಯೋಗ ಹುಡುಕುವವರಿಗೆ ಗುಡ್ ನ್ಯೂಸ್; SBI ನಲ್ಲಿ ಭರ್ಜರಿ ಉದ್ಯೋಗಾವಕಾಶ

ಈ ಸಂದರ್ಭದಲ್ಲಿ ಸಾಗರ್ ಹುಲ್ಲೇಮನೆ, ಅವಿನಾಶ್ ಜನ್ನಾಪುರ, ಚಿರಾಗ್ ಹಲ್ಮಕ್ಕಿ, ಚಿರಾಗ್ ಕೊಟ್ರಕೆರೆ, ಅನುಕುಮಾರ್, ಬಿ.ಜೆ.ಪಿ. ಮುಖಂಡ ದೀಪಕ್ ದೊಡ್ಡಯ್ಯ, ಮೋಹನ್ ಜಾಣಿಗೆ ಮುಂತಾದವರು ಇದ್ದರು.

 

ಹಾಸನಾಂಬೆ ದೇವಿ ಹುಂಡಿ ಎಣಿಕೆ ಮುಕ್ತಾಯ; ಇತಿಹಾಸದಲ್ಲೇ ಈ ಬಾರಿ ಗರಿಷ್ಠ ಆದಾಯ, ಎಷ್ಟು ಗೊತ್ತಾ?

ಹಾಸನ: (ನ್ಯೂಸ್ ಮಲ್ನಾಡ್ ವರದಿ) ಹಾಸನಾಂಬೆ ಹುಂಡಿ ಎಣಿಕೆ ಕಾರ್ಯ ಗುರುವಾರ ಮುಗಿದಿದ್ದು, ಹುಂಡಿಯಲ್ಲಿ ವಿದೇಶಿ ನೋಟುಗಳು, ಚಿನ್ನ ಹಾಗೂ ಬೆಳ್ಳಿಯ ಆಭರಣಗಳನ್ನು ಭಕ್ತರು ಹಾಕಿದ್ದಾರೆ.

 

ಇದನ್ನೂ ಓದಿ; ಪಿಎಂ ಕಿಸಾನ್ ಯೋಜನೆ; 15ನೇ ಕಂತಿನ ಹಣ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂತಾ ಈಗಲೇ ಚೆಕ್ ಮಾಡಿ…

ಗುರುವಾರ ಬೆಳಿಗ್ಗೆಯಿಂದ ಕಾಣಿಕೆ ಹುಂಡಿಯ ಎಣಿಕೆ ಕಾರ್ಯ ಆರಂಭಿಸಲಾಗಿತ್ತು. ಜಿಲ್ಲಾಧಿಕಾರಿ ಸಿ.ಸತ್ಯಭಾಮಾ, ಶಾಸಕ ಸ್ವರೂಪ್ ಪ್ರಕಾಶ್, ಉಪ ವಿಭಾಗಾಧಿಕಾರಿ ಮಾರುತಿ ಉಸ್ತುವಾರಿಯಲ್ಲಿ ಸುಮಾರು 200 ಕ್ಕೂ ಹೆಚ್ಚು ಜನರು ಹುಂಡಿಯಲ್ಲಿ ಸಂಗ್ರಹವಾಗಿರುವ ಹಣದ ಎಣಿಕೆ ಕಾರ್ಯ ಮಾಡಿದರು.

ಇದನ್ನೂ ಓದಿ; ನಿಮ್ಮ ವಾಹನಗಳಿಗೆ ಇನ್ನೂ HSRP ನಂಬರ್ ಪ್ಲೇಟ್ ಹಾಕಿಲ್ವಾ..?; ಚಿಂತೆ ಬಿಡಿ, ಗಡುವು ವಿಸ್ತರಿಸಿದ ಸರ್ಕಾರ; ಏನಿದು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ? ಅಳವಡಿಕೆ ಹೇಗೆ

ಈ ಬಾರಿ ಗರಿಷ್ಠ ಆದಾಯ:
ಇದೇ ಮೊದಲ ಬಾರಿಗೆ ದೇವಾಲಯದಲ್ಲಿ ಅಳವಡಿಸಿದ್ದ ಇ-ಹುಂಡಿಯ ಮೂಲಕ 4.64 ಲಕ್ಷ ಸಂಗ್ರಹವಾಗಿದೆ. ಇನ್ನು ದೇವಾಲಯದಲ್ಲಿ ಇಡಲಾಗಿದ್ದ ಕಾಣಿಕೆ ಹುಂಡಿಗಳಿಂದ 2,50,77,497 ಸಂಗ್ರಹವಾಗಿದೆ. 62 ಗ್ರಾಂ ಚಿನ್ನ, 161 ಗ್ರಾಂ ಬೆಳ್ಳಿ ಕಾಣಿಕೆ ಬಂದಿದೆ. ವಿಶೇಷ ದರ್ಶನದ 1 ಸಾವಿರ ಹಾಗೂ 300 ಟಿಕೆಟ್, ಲಾಡು ಪ್ರಸಾದ ಮಾರಾಟದಿಂದ 6,12,00,074 ಸಂಗ್ರಹವಾಗಿದ್ದು, ಕಾಣಿಕೆ ಹುಂಡಿಯ 2.50 ಲಕ್ಷ ಸೇರಿದಂತೆ ಒಟ್ಟು 8,72,41,531 ರೂ ಸಂಗ್ರಹವಾಗಿದೆ. ಈ ಬಾರಿ 14.20 ಲಕ್ಷ ಮಂದಿ ಭಕ್ತರು ದರ್ಶನ ಪಡೆದಿದ್ದಾರೆ. ಮಹಿಳಾ ಭಕ್ತರ ಸಂಖ್ಯೆ ಹೆಚ್ಚಾಗಿದ್ದರಿಂದ ದಾಖಲೆ ಪ್ರಮಾಣದಲ್ಲಿ ಕಾಣಿಕೆ ಹಣ ಸಂಗ್ರಹವಾಗಿದೆ. ವಿದೇಶಿ ನೋಟುಗಳನ್ನೂ ಸಹ ಕೆಲವರು ಕಾಣಿಕೆಯಾಗಿ ಹಾಕಿದ್ದಾರೆ. 2017 ರಲ್ಲಿ ಸಂಗ್ರಹವಾಗಿದ್ದ 4.14 ಕೋಟಿ ಇದುವರೆಗಿನ ದಾಖಲೆಯಾಗಿತ್ತು.

ಭಕ್ತರ ಪತ್ರ ಓದದಂತೆ ಸೂಚನೆ:
ಪ್ರತಿ ಬಾರಿ ಭಕ್ತರು ತಮ್ಮ ಕೋರಿಕೆಗಳನ್ನು ಬರೆದು ದೇವಿಯ ಹುಂಡಿಗೆ ಹಾಕುತ್ತಾರೆ. ಭಕ್ತರ ಕೋರಿಕೆಯನ್ನು ಗೌಪ್ಯವಾಗಿ ಇಡುವ ಉದ್ದೇಶದಿಂದ ಕಳೆದ ವರ್ಷದಿಂದ ಈ ಪತ್ರಗಳನ್ನು ಓದದಂತೆ ದೇವಸ್ಥಾನದ ಆಡಳಿತ ಮಂಡಳಿ ಸೂಚನೆ ನೀಡಿದೆ. ಹಾಗಾಗಿ ಪತ್ರಗಳನ್ನು ಹಾಗೆಯೇ ದೇವಿಯ ಸನ್ನಿಧಿಯಲ್ಲಿ ಇಡಲಾಗುತ್ತಿದೆ.

ಇದನ್ನೂ ಓದಿ; ರಾಜ್ಯದಲ್ಲಿ ಮತ್ತೆ ಮಳೆರಾಯನ ಆರ್ಭಟ ಶುರು; ಇಷ್ಟು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ವ್ಯಾಪಕ ಮಳೆ; ಈ ಜಿಲ್ಲೆಗೆ ನಿರಾಸೆ ಮೂಡಿಸಿದ ಮಳೆರಾಯ

ಮುಂದಿನ ವರ್ಷ ಹಾಸನಾಂಬೆಯ ದರ್ಶನಕ್ಕೆ ದಿನಾಂಕ ಫಿಕ್ಸ್?:
ಈ ವರ್ಷ ಹಾಸನ ಜಿಲ್ಲಾಡಳಿ ಹಾಸನಾಂಬೆ ಉತ್ಸವನ್ನು ಬಹಳ ಅಚ್ಚುಕಟ್ಟಾಗಿ ಮಾಡಿದ್ದು, ಪ್ರಸಕ್ತ ವರ್ಷದ ಹಾಸನಬಾಂಬೆ ಉತ್ಸವ ತೆರೆ ಕಂಡಿದೆ. ಈ ಬಾರಿ ಒಟ್ಟು 14 ಲಕ್ಷ ಭಕ್ತರು ದೇವಿಯ ದರ್ಶನಕ್ಕೆ ಆಗಮಿಸಿದ್ದು, ಒಟ್ಟು 8 ಕೋಟಿಗೂ ಅಧಿಕ ಆದಾಯ ಸಂಗ್ರಹವಾಗಿದೆ. ಇನ್ನು ಮುಂದಿನ ವರ್ಷದ ಹಾಸನಾಂಬೆ ದರ್ಶನೋತ್ಸವಕ್ಕೂ ದಿನಾಂಕವನ್ನು ನಿಗದಿ ಮಾಡಲಾಗಿದ್ದು, 2024 ರ ಅಕ್ಟೋಬರ್ 24 ರಿಂದ ನವೆಂಬರ್ 3 ರ ವರೆಗೆ ಹಾಸನಾಂಬೆ ದರ್ಶನ ಇರಲಿದೆ. ಇದರೊಂದಿಗೆ ಒಟ್ಟು 9 ದಿನಗಳ ಕಾಲ ಹಾಸನಾಂಬೆ ದರ್ಶನಕ್ಕೆ ಭಕ್ತರಿಗೆ ಅವಕಾಶ ನೀಡಲಾಗುತ್ತದೆ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಕಾಫಿನಾಡು ಚಿಕ್ಕಮಗಳೂರು ಹುಟ್ಟೂರು. ಬರವಣಿಗೆ, ಪ್ರವಾಸ ಆಸಕ್ತ ವಿಷಯಗಳು. ಕನ್ನಡ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಸುಮಾರು 5 ವರ್ಷಗಳ ಅನುಭವ.