ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) 25ಕ್ಕೂ ಹೆಚ್ಚು ವಿದ್ಯಾರ್ಥಿಗಳ ಮೇಲೆ ಹೆಚ್ಚೇನು ದಾಳಿ ಮಾಡಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಚಿಕ್ಕಮಗಳೂರು ನಗರದ ಮೌಂಟೇನ್ ವ್ಯೂ ಕಾಲೇಜಿನಲ್ಲಿ ಗುರುವಾರ ನಡೆದಿದೆ.
ಇದನ್ನೂ ಓದಿ: ಬ್ಯಾಂಕ್ ಆಫ್ ಬರೋಡದಲ್ಲಿ ಜಾಬ್ ಆಫರ್; ಆಕರ್ಷಕ ಸಂಬಳ

ಮಧ್ಯಾಹ್ನ ಊಟಕ್ಕೆ ಬಿಟ್ಟಾಗ ಜೇನಿನ ಗೂಡಿಗೆ ವಿದ್ಯಾರ್ಥಿಯೋರ್ವ ಕಲ್ಲು ಹೊಡೆದಿದ್ದಾನೆ. ಈ ವೇಳೆ ಹೆಚ್ಚೇನುಗಳ ಹಿಂಡು ಊಟಕ್ಕೆಂದು ಹೊರಗಿದ್ದ 25 ವಿದ್ಯಾರ್ಥಿಗಳ ಮೇಲೆ ದಾಳಿ ಮಾಡಿವೆ. ಪರಿಣಾಮ ಓರ್ವ ವಿದ್ಯಾರ್ಥಿನಿ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಆಕೆಯನ್ನು ಹಾಸನದ ಆಸ್ಪತ್ರೆಗೆ ರವಾನಿಸಲಾಗಿದೆ.
ಉಳಿದ ವಿದ್ಯಾರ್ಥಿಗಳಿಗೆ ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: ಅತಿವೃಷ್ಟಿಯಿಂದ ಬೆಳೆ ಕಳೆದುಕೊಂಡವರ ಖಾತೆಗೆ ಹಣ ವರ್ಗಾವಣೆ












