ಎನ್. ಆರ್. ಪುರ: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲೆಯ ಎನ್. ಆರ್. ಪುರ ತಾಲ್ಲೂಕಿನ ಮಡಬೂರು ಗ್ರಾಮ ವ್ಯಾಪ್ತಿಯಲ್ಲಿ ಕಾಡಾನೆಗಳ ಹಿಂಡು ಬೀಡು ಬಿಟ್ಟಿದ್ದು, ಅಡಿಕೆ ಗಿಡಗಳನ್ನು ಧರೆಗುರುಳಿಸಿ ನಾಶ ಮಾಡಿವೆ.
ಇದನ್ನೂ ಓದಿ: ವರ್ಷದ ಮೊದಲ ಸೂರ್ಯಗ್ರಹಣ ಯಾವಾಗ?; ಯಾವ ರಾಶಿಗೆ ಶುಭ, ಯಾರಿಗೆ ಅಶುಭ?

ಮಡಬೂರು ಗ್ರಾಮದ ನಿವಾಸಿ ವನಮಾಲಮ್ಮ ಅವರ ಅಡಿಕೆ ತೋಟಕ್ಕೆ ಮಂಗಳವಾರ ರಾತ್ರಿ 6ಕ್ಕೂ ಹೆಚ್ಚು ಕಾಡಾನೆಗಳ ಹಿಂಡು ದಾಳಿ ಮಾಡಿ, 3ರಿಂದ 4 ವರ್ಷದ ಸುಮಾರು 500ಕ್ಕೂ ಹೆಚ್ಚು ಅಡಿಕೆ ಗಿಡಗಳನ್ನು ಧರೆಗುರುಳಿಸಿವೆ.

ಮಡಬೂರು ಗ್ರಾಮದ ವ್ಯಾಪ್ತಿಗೆ, ಆರಂಬಳ್ಳಿ ಮೀಸಲು ಅರಣ್ಯ ವ್ಯಾಪ್ತಿಗೆ ಭದ್ರಾ ವನ್ಯಜೀವಿ ವಿಭಾಗದಿಂದ ಭದ್ರಾ ಹಿನ್ನೀರು ದಾಟಿ ಮಂಗಳವಾರ ರಾತ್ರಿ ಐದಾರು ಆನೆಗಳು ಬಂದಿದ್ದವು. ನಿನ್ನೆ ಮರಿ ಆನೆಗಳು ಸೇರಿ ಒಟ್ಟು 16 ಕಾಡಾನೆಗಳು ಬಂದಿದ್ದು, ಅರಣ್ಯ ಸಿಬ್ಬಂದಿ ಹಾಗೂ ಆನೆ ಕಾರ್ಯಪಡೆ ತಂಡದ ಸಹಯೋಗದಲ್ಲಿ ಅವುಗಳನ್ನು ಅರಣ್ಯಕ್ಕೆ ಓಡಿಸುವ ಕಾರ್ಯಾಚರಣೆ ಮಾಡಲಾಗಿದೆ.
ಇದನ್ನೂ ಓದಿ: ಸೂರ್ಯನಂತೆ ಹೊಳೆಯಲಿದೆ ಈ ರಾಶಿಯರ ಅದೃಷ್ಟ!; ಯಾವ ರಾಶಿಯವರಿಗೆ ಅದೃಷ್ಟ?












