ಮೂಡಿಗೆರೆ; ಗ್ಯಾಸ್ ಲಾರಿ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ

ಮೂಡಿಗೆರೆ; (ನ್ಯೂಸ್ ಮಲ್ನಾಡ್ ವರದಿ) ಗ್ಯಾಸ್ ಲಾರಿ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ನಲ್ಲಿ ನಡೆದಿದೆ.

 

ಇದನ್ನೂ ಓದಿ; ಈ ಜಿಲ್ಲೆಗಳಲ್ಲಿ ಮಧ್ಯಂತರ ಬೆಳೆ ವಿಮೆ ಬಿಡುಗಡೆ!; ಯಾವ ಜಿಲ್ಲೆಗೆ, ಎಷ್ಟು ಜಮಾ ಆಗಿದೆ; ಮೊಬೈಲ್ ನಲ್ಲಿಯೇ ಮಧ್ಯಂತರ ಬೆಳೆ ವಿಮೆ ಜಮಾ ಚೆಕ್‌ ಮಾಡಿ

ಧರ್ಮಸ್ಥಳ ಮತ್ತು ಚಿಕ್ಕಮಗಳೂರು ಸಂಪರ್ಕಿಸುವ ಚಾರ್ಮಾಡಿ ಘಾಟ್ ಬಳಿ ಗ್ಯಾಸ್ ಲಾರಿ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಅದೃಷ್ಟವಶತ್ ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. (ವರದಿ- ತನು ಕೊಟ್ಟಿಗೆಹಾರ)

ಇದನ್ನೂ ಓದಿ; ಏರ್‌ ಇಂಡಿಯಾದಲ್ಲಿ 828 ಹುದ್ದೆಗಳು ಖಾಲಿ; ನೇರ ಸಂದರ್ಶನ ಮೂಲಕ ಆಯ್ಕೆ

ಮೂಡಿಗೆರೆ ಶಾಸಕಿ ನಯನಾ ಮೋಟಮ್ಮನಿಂದ ಮಹಾ ಯಡವಟ್ಟು…

 

ಬೆಳಗಾವಿ: (ನ್ಯೂಸ್ ಮಲ್ನಾಡ್ ವರದಿ)ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತ ಘಟನೆ ನಡೆದಿದೆ.

ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಅಭಿನಂದಿಸಲು ಬಂದ ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಅವರು ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತಿದ್ದು, ಇದನ್ನು ಗಮನಿಸಿದ ಡಿ.ಕೆ.ಶಿವಕುಮಾರ್ ಅವರು ನಯನಾರ ಹಿಡಿದೆಳೆದು ಏಳುವಂತೆ ಸೂಚಿಸಿದರು. ಮುಖ್ಯಮಂತ್ರಿ ಕುರ್ಚಿ ಮೇಲೆ ಹಾಗೆಲ್ಲ ಕುಳಿತುಕೊಳ್ಳಬಾರದು ಎಂದು ಶಿವಕುಮಾರ್ ಸೂಚ್ಯವಾಗಿ ತಿಳಿ ಹೇಳಿದರು. ಆದರೆ ವಿಪಕ್ಷ ಹಾಗೂ ಆಡಳಿತ ಪಕ್ಷದ ಸದಸ್ಯರು ಈ ಘಟನೆಯನ್ನು ಗಮನಿಸದಂತೆ ಸುಮ್ಮನಿದ್ದರು ಎನ್ನಲಾಗಿದೆ.

ಇದನ್ನೂ ಓದಿ; ಶ್ರಮ ಶಕ್ತಿ ಯೋಜನೆಯಡಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಿ

ಈ ಹಿಂದೆ ಡಿ.ಕೆ.ಶಿವಕುಮಾರ್ ಕೂರಲು ಹೋದಾಗ ನನ್ನ ಕುರ್ಚಿ ಕಣಯ್ಯ ಎಂದಿದ್ದ ಸಿಎಂ:
ಬೆಂಗಳೂರಿನಲ್ಲಿ ನಡೆದಂತಹ ಆಂಬುಲೆನ್ಸ್ ಗೆ ಚಾಲನೆ ನೀಡುವ ಸಂದರ್ಭದಲ್ಲಿ ಡಿ.ಕೆ.ಶಿವಕುಮಾರ್ ಸಿಎಂ ಕುರ್ಚಿ ಮೇಲೆ ಕೂರಲು ಹೋಗಿದ್ದರು. ಈ ವೇಳೆ ಮುಖ್ಯಮಂತ್ರಿ ಅದು ನನ್ನ ಕುರ್ಚಿ ಕಣಯ್ಯ. ಎಂದಿದ್ದರು. ಆಗ ಶಿವಕುಮಾರ್ ನಗುತ್ತಲೇ ಪಕ್ಕದ ಕುರ್ಚಿಗೆ ತೆರಳಿ ಕುಳಿತರು. ಇದೀಗ ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಅವರು ಮುಖ್ಯಮಂತ್ರಿ ಕುರ್ಚಿಯಲ್ಲಿ ಕೂರಲು ಹೋದಗ ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿ ಹೇಳಿದ್ದಾರೆ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಕಾಫಿನಾಡು ಚಿಕ್ಕಮಗಳೂರು ಹುಟ್ಟೂರು. ಬರವಣಿಗೆ, ಪ್ರವಾಸ ಆಸಕ್ತ ವಿಷಯಗಳು. ಕನ್ನಡ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಸುಮಾರು 5 ವರ್ಷಗಳ ಅನುಭವ.