ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಚಾಲಕನ ನಿಯಂತ್ರಣ ತಪ್ಪಿ ಮರದ ದಿಮ್ಮಿಗಳಿದ್ದ ಲಾರಿ ಪಲ್ಟಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ನ ವ್ಯೂ ಪಾಯಿಂಟ್ ಬಳಿ ನಡೆದಿದೆ.

ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗೆ ಸಂಪರ್ಕಿಸುವ ಚಾರ್ಮಾಡಿ ಘಾಟ್ ಬಳಿ, ಚಿಕ್ಕಮಗಳೂರಿನಿಂದ ಮಂಗಳೂರಿಗೆ ಮರದ ದಿಮ್ಮಿಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಲಾರಿ ರಾತ್ರಿ ವೇಳೆ ಪಲ್ಟಿ ಹೊಡೆದಿದೆ. ಪರಿಣಾಮ ಲಾರಿ ಚಾಲಕನಿಗೆ ತಲೆಗೆ ಗಂಭೀರವಾಗಿ ಪೆಟ್ಟಾಗಿದ್ದು ಆಸ್ಪತ್ರೆಗೆ ರವಾನಿಸಲಾಗಿದೆ.
ಇದನ್ನೂ ಓದಿ; ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಉದ್ಯೋಗಾವಕಾಶ; 1,25,000ರ ವರೆಗೆ ಮಾಸಿಕ ವೇತನ; ನೇರ ಸಂದರ್ಶನದ ಮೂಲಕ ಆಯ್ಕೆ
ಮೂಡಿಗೆರೆ ತಾಲೂಕಿನ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. (ವರದಿ- ತನು ಕೊಟ್ಟಿಗೆಹಾರ)
ಕಾರ್ಕಳ: ಖಾಸಗಿ ಬಸ್ ಹಾಗೂ ಬೊಲೆರೊ ಕಾರು ಡಿಕ್ಕಿ | ಜಯಪುರ ಮೂಲದ ವ್ಯಕ್ತಿ ಸಾವು, ಇಬ್ಬರು ಗಂಭೀರ
ಕಾರ್ಕಳ/ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಖಾಸಗಿ ಬಸ್ ಹಾಗೂ ಬೊಲೆರೊ ಕಾರು ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲ್ಲೂಕಿನ ನಿಟ್ಟೆ ಗ್ರಾಮದ ಮಂಜರರ್ ಪಲ್ಕೆ ಎಂಬಲ್ಲಿ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆಯ ಜಯಪುರ ನಿವಾಸಿ ಶಿವಪ್ಪ (48) ಮೃತಪಟ್ಟವರು. ಮಂಜು (45), ಸುಜಯ (28) ಗಾಯಗೊಂಡವರು. ತಾಲ್ಲೂಕಿನ ನಿಟ್ಟೆ ಗ್ರಾಮದ ಮಂಜರರ್ ಪಲ್ಕೆ ಎಂಬಲ್ಲಿ ನಂದಳಿಕೆ ಕಡೆಯಿಂದ ಬರುತ್ತಿದ್ದ ಬೊಲೆರೊ ಕಾರ್ಕಳ ಕಡೆಯಿಂದ ಬರುತ್ತಿದ್ದ ಮುಂಬೈ ಬಸ್ ಗೆ ಡಿಕ್ಕಿ ಹೊಡೆದಿದೆ. ಗಾಯಾಳುಗಳನ್ನು ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ; NTPC ನಲ್ಲಿ ಉದ್ಯೋಗಾವಕಾಶ; 100 ಹುದ್ದೆಗಳಿಗೆ ಅರ್ಜಿ ಆಹ್ವಾನ; 50,000 ದಿಂದ 1,60,000 ವರೆಗೆ ವೇತನ
ತಾಲ್ಲೂಕಿನ ನಂದಳಿಕೆಯ ತಮ್ಮ ಕುಟುಂಬದ ಮನೆಗೆ ದೇವರ ಕಾರ್ಯಕ್ಕಾಗಿ ಚಿಕ್ಕಮಗಳೂರು ಜಿಲ್ಲೆಯ ಜಯಪುರದಿಂದ ಬೆಳಿಗ್ಗೆ ಬಂದಿದ್ದ ಕುಟುಂಬದ ಸದಸ್ಯರು ಮನೆಯಲ್ಲಿ ಪೂಜೆ ಮುಗಿಸಿ ಮಧ್ಯಾಹ್ನ ಹಿಂದಿರುಗುತ್ತಿದ್ದರು. ಮೃತಪಟ್ಟ ಶಿವಪ್ಪ ಕುಟುಂಬದ ಗುರಿಕಾರನಾಗಿ ಮುಂದೆ ನಿಂತು ದೈವದ ಕೆಲಸದ ವಿಧಿವಿಧಾನಗಳನ್ನು ನಡೆಸಿಕೊಟ್ಟಿದ್ದರು ಎನ್ನಲಾಗಿದೆ.
ಇದನ್ನೂ ಓದಿ; ಯುವನಿಧಿ ಜಾರಿಗೆ ದಿನಾಂಕ ಫಿಕ್ಸ್; ಡಿಪ್ಲೋಮಾ, ಪದವೀಧರರು ಈ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ
ಖಾಸಗಿ ಬಸ್ ನಲ್ಲಿದ್ದ 12 ಮಂದಿ ಪ್ರಯಾಣಿಕರನ್ನು ಚಿಕಿತ್ಸೆಗಾಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.












