ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಕಬ್ಬಿಣದ ಏಣಿಯನ್ನ ಕೊಂಡೊಯ್ಯುವಾಗ ವಿದ್ಯುತ್ ತಂತಿ ತಗುಲಿ ವ್ಯಕ್ತಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಗದ್ಗಲ್ ಗ್ರಾಮದ ಬಳಿ ನಡೆದಿದೆ. ಪ್ರಸನ್ನ ಸಾಲ್ಡನ್ (48) ಮೃತ ದುರ್ದೈವಿ.
ಇದನ್ನೂ ಓದಿ: ಜಮೀನಿನ ದಾರಿಗೆ ಸರ್ಕಾರದಿಂದ ಬಂತು ಹೊಸ ರೂಲ್ಸ್!; ಏನದು? ಇಲ್ಲಿದೆ ನೋಡಿ

ಮೃತ ಪ್ರಸನ್ನ ಮನೆಯಲ್ಲಿ ಬೇರೆ ಕೆಲಸದ ನಿಮಿತ್ತ ಕಾಫಿ ತೋಟದಿಂದ ಕಬ್ಬಿಣದ ಏಣಿಯನ್ನ ಮನೆಗೆ ತಂದಿದ್ದರು. ಕೆಲಸವಾದ ಬಳಿಕ ಕಾಫಿ ತೋಟಕ್ಕೆ ಇಡಲು ಗಬ್ಗಲ್ ಗ್ರಾಮದ ಶಾಲೆ ಪಕ್ಕ ಎತ್ತರದ ಪ್ರದೇಶದಲ್ಲಿ ಏಣಿಯನ್ನ ಹೊತ್ತುಕೊಂಡು ಹೋಗುವಾಗ ವಿದ್ಯುತ್ ತಂತಿಗೆ ತಗುಲಿ ಸ್ಥಳದಲ್ಲಿ ಕೊನೆಯುಸಿರೆಳೆದಿದ್ದಾರೆ.

ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆಯ ಎರಡು ತಿಂಗಳ ಹಣ ಜಮಾ; ಜಮಾ ಆಗದೇ ಇರುವವರು ತಕ್ಷಣ ಈ ಕೆಲಸ ಮಾಡಿ
ಸ್ಥಳಕ್ಕೆ ಮೆಸ್ಕಾಂ ಸಿಬ್ಬಂದಿಗಳು ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಜಿಯೋ ಕಂಪನಿಯಿಂದ ಬಿಡುಗಡೆಯಾಗಲಿದೆ 5G ಸ್ಮಾರ್ಟ್ ಫೋನ್; ಕೇವಲ 6 ಸಾವಿರಕ್ಕೆ ಸಿಗಲಿದೆ ಈ ಫೋನ್: ಯಾವಾಗ ಬಿಡುಗಡೆ?















