ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಬಾಳೂರು ಎಸ್ಟೇಟ್ ನಿಂದ ಮೂಡಿಗೆರೆ ಆಸ್ಪತ್ರೆಗೆ ಸಾಗುವ ಮಾರ್ಗ ಮಧ್ಯೆ ಮಹಿಳೆಯೋರ್ವರು ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ಭಾನುವಾರ ನಡೆದಿದೆ. ಬಾಳೂರು ಎಸ್ಟೇಟ್ ನ ಸುಲ್ತಾನ್ ಪರ್ವೀನ್ ಹೆರಿಗೆಯಾದ ಮಹಿಳೆ.
ಇದನ್ನೂ ಓದಿ; RBI ನಿಂದ ಉದ್ಯೋಗಾವಕಾಶ; ವಿವಿಧ ಪ್ರದೇಶಗಳಲ್ಲಿ ಮೆಡಿಕಲ್ ಕನ್ಸಲ್ ಟಂಟ್ಗಳ ನೇಮಕ

ಬಾಳೂರು ಎಸ್ಟೇಟ್ ನಲ್ಲಿ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಮಹಿಳೆಯ ಪತಿ ನೂರ್ ಮೊಹಮ್ಮದ್ ಬಣಕಲ್ ಆಂಬುಲೆನ್ಸ್ ಮಾಲಿಕ ಆರೀಫ್ ಅವರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಸಮಾಜ ಸೇವಕ ಆರೀಫ್ ಮಹಿಳೆಯನ್ನು ತನ್ನ ಅಂಬುಲೆನ್ಸ್ ನಲ್ಲಿ ಕೂರಿಸಿ ಮೂಡಿಗೆರೆಗೆ ಸಾಗಿಸುವ ಮಾರ್ಗ ಮಧ್ಯೆ ಮಹಿಳೆಗೆ ಹೆರಿಗೆಯಾಗಿದ್ದು, ಕೂಡಲೇ ಮಹಿಳೆಯನ್ನು ಮೂಡಿಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ; ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
ಆರೋಗ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಅಸಮಾಧಾನ:
ಮೂಡಿಗೆರೆ ತಾಲೂಕಿನಲ್ಲಿ ಕಳೆದ 10 ದಿನಗಳಲ್ಲಿ ಆಂಬುಲೆನ್ಸ್ ನಲ್ಲಿ ಹೆರಿಗೆಯಾದ ಮೂರನೇ ಪ್ರಕರಣವಾಗಿದೆ. ಆರೋಗ್ಯ ಇಲಾಖೆ ಅಧಿಕಾರಿಗಳ ಬಳಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿರುವ ಎಲ್ಲಾ ಮಾಹಿತಿ ಇರಲಿದ್ದು, ಹೆರಿಗೆ ದಿನಾಂಕದ ಮೊದಲು ಅಂಗನವಾಡಿ ಕಾರ್ಯಕರ್ತರ ಮೂಲಕ ಅವರಿಗೆ ಎಚ್ಚರಿಕೆ ಕೊಡಿಸಬಹುದು. ಆದರೆ, ಮಹಿಳೆಯರು ಹೆರಿಗೆ ನೋವು ಬರುವವರೆಗೆ ಮನೆಯಲ್ಲೇ ಇದ್ದರೆ. ಆರೋಗ್ಯ ಅಧಿಕಾರಿಗಳು ಗರ್ಭಿಣಿಯರ ಬಗ್ಗೆ ಎಚ್ಚರಿಕೆ ವಹಿಸಬೇಕೆಂದು ಸ್ಥಳಿಯರು ಆಗ್ರಹಿಸಿದ್ದಾರೆ. (ವರದಿ- ತನು ಕೊಟ್ಟಿಗೆಹಾರ)
ಜಯಪುರ: ಚಾಲಕನ ನಿಯಂತ್ರಣ ತಪ್ಪಿ ಅಯ್ಯಪ್ಪ ಮಾಲಾಧಾರಿಗಳ ಬಸ್ ಪಲ್ಟಿ
ಜಯಪುರ: (ನ್ಯೂಸ್ ಮಲ್ನಾಡ್ ವರದಿ) ಚಾಲಕನ ನಿಯಂತ್ರಣ ತಪ್ಪಿ ಅಯ್ಯಪ್ಪ ಮಾಲಾಧಾರಿಗಳ ಬಸ್ ಪಲ್ಟಿಯಾಗಿರುವ ಘಟನೆ ಭಾನುವಾರ (ನಿನ್ನೆ) ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಗುಡ್ಡೆತೋಟದ ಬಳಿ ನಡೆದಿದೆ.
ಶೃಂಗೇರಿಯಿಂದ ಹೊರನಾಡಿಗೆ ತೆರಳುತ್ತಿದ್ದ ಅಯ್ಯಪ್ಪ ಮಾಲಾಧಾರಿಗಳ ಬಸ್ ಗುಡ್ಡೇತೋಟದ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮ 15 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲ್ಲೂಕಿನ ರಂಗಸಮುದ್ರ ಗ್ರಾಮದ 34 ಅಯ್ಯಪ್ಪ ಮಾಲಾಧಾರಿಗಳು ಶೃಂಗೇರಿಯಿಂದ ಹೊರನಾಡಿಗೆ ತೆರಳುತ್ತಿದ್ದ ವೇಳೆ ಘಟನೆ ನಡೆದಿದ್ದು, ಗಾಯಾಳುಗಳನ್ನು ಜಯಪುರ, ಶೃಂಗೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ; ರಾಜ್ಯದ ರೈತರಿಗೆ ಗುಡ್ ನ್ಯೂಸ್: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ












