ಮೂಡಿಗೆರೆ: ಮರ ಕಡಿಯುವಾಗ ತಲೆ ಮೇಲೆ ಮರ ಬಿದ್ದು ಯುವಕ ಸಾವು

ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಮರ ಕಡಿಯುವಾಗ ತಲೆ ಮೇಲೆ ಮರ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಾಳೂರು ಹೋಬಳಿಯ ಬಪ್ಪಳಿಕೆಯಲ್ಲಿ (ಹೆಗ್ಗುಡ್ಲು ಎಸ್ಟೇಟಿನಲ್ಲಿ)  ನಡೆದಿದೆ. ಅಬ್ದುಲ್ ಅಜೀಜ್ (25) ಮೃತ ದುರ್ದೈವಿ.


ಇದನ್ನೂ ಓದಿ: ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ


ಕೇರಳದಿಂದ ಟಿಂಬರ್ ಕಡಿಯಲು ಅಪ್ಪ-ಮಗ ಬಂದಿದ್ದು, ಹೆಗ್ಗುಡ್ಲು ಎಸ್ಟೇಟಿನಲ್ಲಿ ಮರದ ಮೇಲೆ ಅಬ್ದುಲ್ ಅಜೀಜ್ ನ ತಂದೆ ಮರ ಕಡಿಯುತ್ತಿದ್ದ ವೇಳೆ, ಅದೇ ಮರ ಕೆಳಗೆ ಇದ್ದ ಅಬ್ದುಲ್ ಅಜೀಜ್ ನ ತಲೆ ಮೇಲೆ ಬಿದ್ದಿದೆ. ಪರಿಣಾಮ ಸ್ಥಳದಲ್ಲೆ ಸಾವನ್ನಪ್ಪಿದ್ದಾನೆ.


ಇದನ್ನೂ ಓದಿ: ಆಧಾರ್ ಕಾರ್ಡ್ ಹೊಂದಿರುವವರಿಗೆ ಮಹತ್ವದ ಮಾಹಿತಿ; ಆಧಾರ್ ಅಪ್ಡೇಟ್ ಮಾಡಲು ಇದೇ ಕೊನೆ ದಿನ..!


ಘಟನೆ ಕುರಿತು ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಎನ್.ಆರ್ ಪುರ: 30ಕ್ಕೂ ಹೆಚ್ಚು ಮಂಗಗಳ ಮಾರಣಹೋಮ

ಎನ್. ಆರ್. ಪುರ: (ನ್ಯೂಸ್ ಮಲ್ನಾಡ್ ವರದಿ) 30 ಮಂಗಗಳನ್ನು ಕೊಂದು ರಸ್ತೆಗೆ ತಂದು ಎಸೆದು ಹೋಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್. ಆರ್. ಪುರ ತಾಲೂಕಿನ ದ್ಯಾವಣ ಬಳಿ ನಡೆದಿದೆ.


ಇದನ್ನೂ ಓದಿ: ವಾಹನ ಸವಾರರ ಗಮನಕ್ಕೆ; ನೀವಿನ್ನೂ HSRP ನಂಬರ್ ಪ್ಲೇಟ್ ಹಾಕಿಸಿಲ್ವಾ…?; ಹಾಗಿದ್ರೆ ಮಿಸ್ ಮಾಡ್ದೆ ಈ ಸುದ್ದಿ ಓದಿ


ಬಾಳೆಹಣ್ಣಿಗೆ ಜ್ಞಾನ ತಪ್ಪುವ ಔಷಧವಿಟ್ಟು, ಜ್ಞಾನ ತಪ್ಪಿದ ಬಳಿಕ ತಲೆಗೆ ಹೊಡೆದು ಕೊಂದಿದ್ದು, 30 ಮಂಗಗಳ ತಲೆಯಲ್ಲೂ ಒಂದೇ ರೀತಿ ಗಾಯವಾಗಿ ರಕ್ತಸುರಿದು ಸಾವನ್ನಪ್ಪಿದೆ ಎನ್ನಲಾಗಿದೆ. 16 ಗಂಡು, 14 ಹೆಣ್ಣು, 4 ಮರಿಗಳ ಮಾರಣ ಹೋಮ ನಡೆದಿದ್ದು, ಸ್ಥಳಕ್ಕೆ ಡಿ.ಎಫ್.ಓ, ಆರ್.ಎಫ್.ಓ, ಪಿ.ಎಸ್.ಐ. ಪಶುಸಂಗೋಪನೆ, ಪಶುವೈದ್ಯ, ಪಂಚಾಯಿತಿ, ಆಶಾಕಾರ್ಯರ್ತೆಯರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಂಗಗಳ ಮಾರಣ ಹೋಮಕ್ಕೆ ಪ್ರಾಣಿಪ್ರಿಯರು ಆಕ್ರೋಶ ವ್ಯಕ್ತಪಡಿಸಿದ್ದು, ಮಂಗಗಳ ಕೊಲೆಗೆ ನಿಖರ ಕಾರಣ ತಿಳಿದು ಬರಬೇಕಿದೆ.


ಇದನ್ನೂ ಓದಿ: ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ


ಈ ಕುರಿತು ಎನ್.ಆರ್.ಪುರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.