ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಕಾಫಿನಾಡ ಮಲೆನಾಡು ಭಾಗದಲ್ಲಿ ಮುಂದುವರಿದ ಮಳೆ ಅಬ್ಬರದ ಜೊತೆಗೆ ಬೀಸ್ತಿರೋ ರಣ ಗಾಳಿಗೆ ಯುವಕನ ತಲೆ ಮೇಲೆ ವಿದ್ಯುತ್ ಕಂಬ ಬಿದ್ದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ತುಂಬರಗಡಿ ಗ್ರಾಮದಲ್ಲಿ ನಡೆದಿದೆ.

ಇದನ್ನೂ ಓದಿ: ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ

ದಿವೀತ್ ಎಂಬ ಯುವಕನ ತಲೆ ಮೇಲೆ ವಿದ್ಯುತ್ ಕಂಬ ಬಿದ್ದು, ಗಂಭೀರ ಗಾಯವಾಗಿದೆ. ಬಸ್ ಇಳಿದು ಮನೆಗೆ ಹೋಗುತ್ತಿದ್ದ ವೇಳೆ ಈ ಘಟನೆ ನಡೆದಿದ್ದು, ದೊಡ್ಡ ಅನಾಹುತದಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


ಇದನ್ನೂ ಓದಿ: ಈ ತಾಲೂಕಿನ ಗ್ರಾಮ ಪಂಚಾಯಿತಿಯಲ್ಲಿ ಜಾಬ್ ಆಫರ್; ಪಿಯುಸಿ ಪಾಸ್ ಆದವರು ಅರ್ಜಿ ಸಲ್ಲಿಸಿ












