
ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಬೈಕ್ ನಲ್ಲಿ ಬಂದ ಅಪರಿಚಿತರು ಲಾರಿಯನ್ನು ಅಡ್ಡ ಗಟ್ಟಿ ಹಣ ದೋಚಿ ಪರಾರಿಯಾದ ಘಟನೆ ನಡೆದಿದೆ.
ಇದನ್ನೂ ಓದಿ: ಸರ್ಕಾರಿ ನೌಕರರಿಗೆ ಈ ಯೋಜನೆ ಅಡಿಯಲ್ಲಿ ಸಿಗಲಿದೆ ಉಚಿತ ಚಿಕಿತ್ಸೆ ಯಾವ ಯೋಜನೆ? ಚಿಕಿತ್ಸಾ ವೆಚ್ಚ ಎಷ್ಟು?

ಚಿಕ್ಕಮಗಳೂರು -ಮಂಗಳೂರು ಸಂಪರ್ಕಿಸುವ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಎರಡು ಬೈಕ್ ನಲ್ಲಿ ಬಂದ ಅಪರಿಚಿತರು ಮೀನು ಸಾಗಾಟದ ಲಾರಿಯನ್ನು ತಡೆದು, ಲಾರಿಯ ಗಾಜನ್ನು ಒಡೆದು ಚಾಲಕನ ಮೇಲೆ ಹಲ್ಲೆ ನಡೆಸಿ ಆತನ ಬಳಿ ಇದ್ದ 1.61 ಲಕ್ಷ ರೂ ಹಣವನ್ನು ದರೋಡೆ ಮಾಡಿ ಎಸ್ಕೇಪ್ ಆಗಿರುವ ಘಟನೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ಪ್ರದೇಶದಲ್ಲಿ ನಿನ್ನೆ ಸಂಜೆ ನಡೆದಿದೆ.

ಇದನ್ನೂ ಓದಿ: 475 ಇಂಜಿನಿಯರಿಂಗ್ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಆರಂಭ ಸಂಬಳ ಎಷ್ಟು?, ಇಲ್ಲಿದೆ ಡಿಟೈಲ್ಸ್
ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಲಾರಿ ಚಾಲಕ ಸಲಾಂ ಬಣಕಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.ಚಿಕ್ಕಮಗಳೂರು DYSP ಶೈಲೇಂದ್ರ ನೇತೃತ್ವದಲ್ಲಿ ತನಿಖೆ ನಡೆಸಿ ಲಾರಿ ಚಾಲಕ ಸಲಾಂ ನನ್ನು ಪೊಲೀಸರು ವಿಚಾರಣೆ ಮಾಡುತ್ತಿದ್ದಾರೆ.
ಇದನ್ನೂ ಓದಿ: ಫಿಶ್ ಪ್ರಿಯರೇ ಎಚ್ಚರ…! ಈ ಮೀನುಗಳನ್ನು ತಿಂದ್ರೆ ಆರೋಗ್ಯಕ್ಕಿದೆ ಕುತ್ತು!
ಅರ್ಧದಷ್ಟು ಘಾಟ್ ಪ್ರದೇಶವನ್ನು ಚಿಕ್ಕಮಗಳೂರು, ಮಂಗಳೂರು ಎರಡು ಜಿಲ್ಲೆಗಳು ಹಂಚಿಕೊಂಡಿದ್ದು ಈ ಘಟನೆಯಿಂದ ಚಾರ್ಮಾಡಿ ಘಾಟ್ ಪ್ರದೇಶದಲ್ಲಿ ಸಂಚರಿಸುವ ವಾಹನ ಸವಾರರು ಎಚ್ಚರಿಕೆಯಿಂದ ಸಂಚರಿಸಬೇಕಾಗಿದ್ದು. ಅಲ್ಲದೇ ಹಗಲು ಹಾಗೂ ರಾತ್ರಿ ವೇಳೆಯಲ್ಲಿ ಪೊಲೀಸ್ ಬೀಟ್ ಹೆಚ್ಚಿಸಬೇಕೆಂದು ವಾಹನ ಸವಾರರು ಒತ್ತಾಯಿಸಿದ್ದಾರೆ.
ಇದನ್ನೂ ಓದಿ: ಶಿಕ್ಷಕರ ಗಮನಕ್ಕೆ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ













