ಮೂಡಿಗೆರೆ: ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಬಿಇಓ ಕಚೇರಿಯ ವ್ಯವಸ್ಥಾಪಕ

ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ)ಬಿಇಓ ಕಚೇರಿಯ ವ್ಯವಸ್ಥಾಪಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ನಡೆದಿದೆ. ಕಡೂರು ಮೂಲದ ನಿಂಗ ನಾಯಕ (57) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ವ್ಯವಸ್ಥಾಪಕ.

 

ಇದನ್ನೂ ಓದಿ; ಮಹಾನಗರ ಪಾಲಿಕೆಯಲ್ಲಿ ಉದ್ಯೋಗಾವಕಾಶ; 119 ಪೌರಕಾರ್ಮಿಕರ ನೇಮಕಾತಿಗೆ ಅರ್ಜಿ ಆಹ್ವಾನ; 17,000-28,950 ಮಾಸಿಕ ವೇತನ

ಇಂದು ಬೆಳಿಗ್ಗೆ ಬಿಇಓ ಕಚೇರಿಯಲ್ಲಿಯೇ ಡೆತ್ ನೋಟ್ ಬರೆದಿಟ್ಟು ನೇಣು ಬಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಎರಡು ವರ್ಷಗಳಿಂದ ಕೆಲಸ ಮಾಡುತ್ತಿದ್ದ ನಿಂಗ ನಾಯಕ, ಕೆಲಸದ ಒತ್ತಡದ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ; SC-ST ವರ್ಗದವರಿಗೆ ಮತ್ತೊಂದು ಗುಡ್ ನ್ಯೂಸ್; ಉಚಿತ ವಾಹನ ತರಬೇತಿಗೆ ಅರ್ಜಿ ಆಹ್ವಾನ; ಯಾವ ವಾಹನ ತರಬೇತಿ, ಎಲ್ಲಿ, ಅರ್ಜಿ ಸಲ್ಲಿಕೆ ಹೇಗೆ?

ಮೂಡಿಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. (ವರದಿ- ತನು ಕೊಟ್ಟಿಗೆಹಾರ)

ಡೆತ್ ನೋಟ್ ನಲ್ಲಿ ಏನಿದೆ?;
ಶಿಕ್ಷಣ ಇಲಾಖೆಯಲ್ಲಿ ಕೆಲಸದ ಒತ್ತಡ ಅಧಿಕವಾಗಿತ್ತು. ಡಿ.ದರ್ಜೆ ನೌಕರರು ಕಡಿಮೆ ಇದ್ದಾರೆ. ಎಲ್ಲಾ ಕೆಲಸ ಸಮಯಕ್ಕೆ ಸರಿಯಾಗಿ ನಿರ್ವಹಿಸಲು ಸಾಧ್ಯವಾಗುತ್ತಿರಲಿಲ್ಲ. ಇದರಿಂದ ಮನೆಯಲ್ಲಿ ನಿದ್ದೆ ಬರುತ್ತಿರಲಿಲ್ಲ ಎಂದು ಡೆತ್ ನೋಟ್ ಬರೆದು ನೇಣಿಗೆ ಶರಣಾಗಿದ್ದಾರೆ.

ಚಿಕ್ಕಮಗಳೂರು: ಜಿಲ್ಲಾಸ್ಪತ್ರೆ ವೈದ್ಯರ ನಿರ್ಲಕ್ಷ್ಯ ಆರೋಪ; ಬಾಣಂತಿ ಮೃತ್ಯು

 

ಚಿಕ್ಕಮಗಳೂರು:  (ನ್ಯೂಸ್ ಮಲ್ನಾಡ್ ವರದಿ) ಜಿಲ್ಲಾಸ್ಪತ್ರೆಯ ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಮೃತಪಟ್ಟಿದ್ದಾಳೆಂದು ಆರೋಪಿಸಲಾಗಿದೆ. ಕಡೂರು ತಾಲೂಕಿನ ವಡರೇಹಳ್ಳಿ ತಾಂಡ್ಯದ ನಿವಾಸಿ ರಂಜಿತಾ ಬಾಯಿ (22) ಮೃತ ಮಹಿಳೆ.

ಸಿಬ್ಬಂದಿಯ ನಿರ್ಲಕ್ಷ್ಯದಿಂದ ಬಾಣಂತಿ ಮೃತಪಟ್ಟಿದ್ದಾಳೆಂದು ಆರೋಪಿಸಿ ಮಹಿಳೆಯ ಸಂಬಂಧಿಕರು ಆಸ್ಪತ್ರೆಯ ಆವರಣದಲ್ಲಿ ಕೆಲ ಕಾಲ ಪ್ರತಿಭಟಿಸಿದ ಘಟನೆ ನಡೆದಿದೆ. ಶನಿವಾರ ಮಧ್ಯಾಹ್ನ ಹೆರಿಗೆಯಾಗಿದ್ದು, ರಾತ್ರಿ ವೇಳೆ ರಂಜಿತಾ ಬಾಯಿ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಈ ಬಗ್ಗೆ ಮಾಹಿತಿ ನೀಡಿದರೂ ಅಸ್ಪತ್ರೆ ಸಿಬ್ಬಂದಿ ಸ್ಪಂದಿಸಿಲ್ಲ ಸಕಾಲದಲ್ಲಿ ವೈದ್ಯರು ಬಂದು ತಪಾಸಣೆ ಮಾಡಿಲ್ಲ, ಹೆರಿಗೆ ಮಾಡಿಸಿದ್ದಕ್ಕೆ ಆಸ್ಪತ್ರೆ ಸಿಬ್ಬಂದಿ ಹಣ ಕೇಳುತ್ತಿದ್ದಾರೆ ಎಂದು ಸಂಬಂಧಿಕರು ಆರೋಪಿಸಿದ್ದಾರೆ.

ಬಾಣಂತಿಯ ಸಾವಿಗೆ ಕಾರಣರಾದವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕೆಂದು ಸಂಬಂಧಿಕರು ಆಗ್ರಹಿಸಿದರು. ಈ ವೇಳೆ ಸ್ಥಳಕ್ಕೆ ಆಗಮಿಸಿದ ವೈದ್ಯಾಧಿಕಾರಿಗಳು ಸೂಕ್ತ ಕ್ರಮದ ಭರವಸೆ ನೀಡಿದ್ದರಿಂದ ಸಂಬಂಧಿಕರು ಪ್ರತಿಭಟನೆ ಕೈಬಿಟ್ಟಿದ್ದಾರೆಂದು ತಿಳಿದು ಬಂದಿದೆ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಕಾಫಿನಾಡು ಚಿಕ್ಕಮಗಳೂರು ಹುಟ್ಟೂರು. ಬರವಣಿಗೆ, ಪ್ರವಾಸ ಆಸಕ್ತ ವಿಷಯಗಳು. ಕನ್ನಡ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಸುಮಾರು 5 ವರ್ಷಗಳ ಅನುಭವ.