ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಇಲ್ಲಿನ ಮಂಡಲದ ಇಬ್ಬರು ಬಿ.ಜೆ.ಪಿ. ಮುಖಂಡರನ್ನು ಪಕ್ಷದಿಂದ ಅಮಾನತು ಮಾಡಿದ್ದ ಆದೇಶವನ್ನು ವಾಪಾಸ್ಸು ಪಡೆಯಲಾಗಿದೆ.
ಇದನ್ನೂ ಓದಿ; ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ವಾ?; ಹೆಸರು ನೋಂದಣಿಗೆ ಅವಕಾಶ

ಬಿಜೆಪಿ ಮೂಡಿಗೆರೆ ಮಂಡಲದ ಬಣಕಲ್ ಹೋಬಳಿ ಅಧ್ಯಕ್ಷ ಪಿ.ಜಿ.ಅನುಕುಮಾರ್ ಮತ್ತು ಗೋಣಿಬೀಡು ಹೋಬಳಿ ಅಧ್ಯಕ್ಷ ಭರತ್ ಕನ್ನೇಹಳ್ಳಿ ಇವರನ್ನು ಅಶಿಸ್ತಿನ ಕಾರಣ ನೀಡಿ ಇತ್ತೀಚೆಗೆ ಪಕ್ಷದಿಂದ ಅಮಾನತು ಮಾಡಲಾಗಿತ್ತು. ಇದೀಗ ಈ ಅಮಾನತು ಆದೇಶವನ್ನು ಪಕ್ಷದ ಜಿಲ್ಲಾಧ್ಯಕ್ಷ ದೇವರಾಜ ಶೆಟ್ಟಿ ಸೋಮವಾರ ಅಮಾನತು ಆದೇಶವನ್ನು ವಾಪಾಸ್ಸು ಪಡೆಯಲಾಗಿದೆ.
ಮೂಡಿಗೆರೆ ಮಂಡಲ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಸಂಬಂಧಿಸಿದಂತೆ ಉಂಟಾದ ಗೊಂದಲ ಹಾಗೂ ಪಕ್ಷದ ಅಧ್ಯಕ್ಷರನ್ನಾಗಿ ಗಜೇಂದ್ರ ಅವರನ್ನು ನೇಮಕ ಮಾಡಿದ ಸಂದರ್ಭದಲ್ಲಿ ಅಸಮಾಧಾನ ಸ್ಪೋಟಗೊಂಡಿತ್ತು. ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳಾಗಿದ್ದ ಅನುಕುಮಾರ್ ಮತ್ತು ಭರತ್ ತಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ ಎಂದು ಆಕ್ರೋಶ ಹೊರಹಾಕಿದ್ದರು. ಈ ಸಂಬಂಧ ನಡೆದ ಸಭೆಯೊಂದರಲ್ಲಿ ತಾ.ಪಂ. ಮಾಜಿ ಅಧ್ಯಕ್ಷ ಕೆ.ಸಿ.ರತನ್ ಅವರ ಮೇಲೆ ಅನುಕುಮಾರ್ ಮತ್ತು ಭರತ್ ಹಲ್ಲೆ ನಡೆಸಿದ್ದರು ಎಂದು ಆರೋಪಿಸಲಾಗಿತ್ತು. ಈ ಘಟನೆಯ ಹಿನ್ನಲೆಯಲ್ಲಿ ಜಿಲ್ಲಾಧ್ಯಕ್ಷರು ಅಶಿಸ್ತಿನ ಕಾರಣ ನೀಡಿ ಅನುಕುಮಾರ್ ಮತ್ತು ಭರತ್ ಅವರನ್ನು ಪಕ್ಷದಿಂದ ಅಮಾನತು ಮಾಡಿದ್ದರು. ಯಾವುದೇ ನೋಟೀಸ್ ನೀಡದೆ ಏಕಾಏಕಿ ಅಮಾನತು ಮಾಡಲಾಗಿದೆ ಎಂದು ಅಮಾನತುಗೊಂಡಿದ್ದ ಮುಖಂಡರು ಜಿಲ್ಲಾಧ್ಯಕ್ಷರ ವಿರುದ್ಧ ಹರಿಹಾಯ್ದಿದ್ದರು. ಜೊತೆಗೆ ಇವರ ಬೆಂಬಲಿಗರು ಸಹ ಅಸಮಾಧಾನ ವ್ಯಕ್ತಪಡಿಸಿದ್ದರು.
ಇದನ್ನೂ ಓದಿ; ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆ; ಎರಡು ತಿಂಗಳ ಹಣ ಬರದೇ ಇದ್ರೆ ತಕ್ಷಣ ಈ ಕೆಲಸ ಮಾಡಿ!
ಈ ಅಮಾನತು ಆದೇಶದ ಹಿನ್ನೆಲೆಯಲ್ಲಿ ಮಾ.15 ರಂದು ಮೂಡಿಗೆರೆ ಪಟ್ಟಣದಲ್ಲಿ ಏರ್ಪಡಿಸಲಾಗಿದ್ದ ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭದ ದಿನವೇ ಅನುಕುಮಾರ್ ಮತ್ತು ಭರತ್ ಬೆಂಬಲಿಗರು ದೊಡ್ಡ ಸಂಖ್ಯೆಯಲ್ಲಿ ಸೇರಿ ಸ್ವಾಭಿಮಾನಿ ಕಾರ್ಯಕರ್ತರ ಹೆಸರಿನಲ್ಲಿ ಪರ್ಯಾಯ ಸಮಾವೇಶ ಮಾಡಿದ್ದರು. ಈ ಸಮಾವೇಶಕ್ಕೆ ದೊಡ್ಡ ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಭಾಗವಹಿಸಿದ್ದರು. ಈ ಗೊಂದಲದಿಂದಾಗಿ ಅಂದು ನಿಗದಿಯಾಗಿದ್ದ ಪದಗ್ರಹಣ ಸಮಾರಂಭವನ್ನು ಮುಂದೂಡಲಾಗಿತ್ತು. ಗೊಂದಲ ನಿವಾರಣೆಗೆ ಮುಖಂಡರು ಆಸಕ್ತಿ ತೋರಿ ಮುಂದಿನ ದಿನಗಳಲ್ಲ ಒಟ್ಟಾಗಿ ಸೇರಿ ಪದಗ್ರಹಣ ಸಮಾರಂಭ ಏರ್ಪಡಿಸುವ ಭರವಸೆ ವ್ಯಕ್ತಪಡಿಸಿದ್ದರು. ಈ ಹಿನ್ನಲೆಯಲ್ಲಿ ಪಕ್ಷದ ಹಿರಿಯ ಮುಖಂಡರು ಮಧ್ಯಪ್ರವೇಶಿಸಿ ಪರಸ್ಪರ ಮುನಿಸಿಕೊಂಡಿದ್ದ ಎರಡೂ ಗುಂಪಿನ ನಾಯಕರ ನಡುವೆ ರಾಜಿಸಂಧಾನ ನಡೆಸಿದ್ದಾರೆ ಎನ್ನಲಾಗಿದೆ. ಅದರ ಪರಿಣಾಮ ಜಿಲ್ಲಾಧ್ಯಕ್ಷರು ಅಮಾನತು ಆದೇಶವನ್ನು ವಾಪಾಸ್ಸು ಪಡೆಯಲಾಗಿದೆ.
ಇದನ್ನೂ ಓದಿ; ಹಟ್ಟಿ ಚಿನ್ನದ ಗಣಿಯಲ್ಲಿ ಉದ್ಯೋಗ; ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಅಮಾನತು ವಾಪಾಸ್ಸು ಪಡೆದಿರುವ ಆದೇಶ ಇನ್ನೂ ನಮಗೆ ಅಧಿಕೃತವಾಗಿ ತಲುಪಿಲ್ಲ. ಪಕ್ಷದ ಹಿರಿಯ ಮುಖಂಡರಾದ ಎಂ.ಕೆ.ಪ್ರಾಣೇಶ್ ಅವರು, ಸಿ.ಟಿ.ರವಿಯವರು ಕರೆದು ಮಾತನಾಡಿದ್ದಾರೆ. ಅವರ ಮಾರ್ಗದರ್ಶನದಂತೆ ಮತ್ತು ಬೆಂಬಲಿಗರ ಅಭಿಪ್ರಾಯದಂತೆ ಪಕ್ಷದ ಹಿತದೃಷ್ಟಿಯಿಂದ ಒಟ್ಟಾಗಿ ಹೋಗಲು ತೀರ್ಮಾನವಾಗಿದೆ. ಈ ಹಿಂದೆ ಮಾಜಿ ಶಾಸಕರ ಜೊತೆ ಜೆ.ಡಿ.ಎಸ್ ಗೆ ಹೋಗಿರುವ ಮುಖಂಡರು ಮತ್ತು ಕಾರ್ಯಕರ್ತರನ್ನು ಪಕ್ಷಕ್ಕೆ ಮರಳಿ ಸೇರಿಸಿಕೊಳ್ಳಬೇಕು. ಪದಗ್ರಹಣ ಸಮಾರಂಭ ಕೋಟ ಶ್ರೀನಿವಾಸ ಪೂಜಾರಿ, ಸಿ.ಟಿ. ರವಿ, ಎಂ.ಕೆ. ಪ್ರಾಣೇಶ್ ಅವರುಗಳ ಉಪಸ್ಥಿತಿಯಲ್ಲಿ ನಡೆಯಬೇಕು ಎಂದು ಬೇಡಿಕೆ ಇಟ್ಟಿದ್ದೇವೆ. ಬೆಂಬಲಿಗರ ಅಭಿಪ್ರಾಯ ಪಡೆದು ಮುಂದಿನ ತೀರ್ಮಾನಗಳನ್ನು ಕೈಗೊಳ್ಳುತ್ತೇವೆ. -ಪಿ.ಜಿ. ಅನುಕುಮಾರ್ (ವರದಿ -ತನು ಕೊಟ್ಟಿಗೆಹಾರ)












