ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಬಂಡೆ ಕಲ್ಲಿಗೆ ಗುದ್ದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ನಲ್ಲಿ ನಡೆದಿದೆ.
ಇದನ್ನೂ ಓದಿ; ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!

ಉಜಿರೆಯಿಂದ ಮೂಡಿಗೆರೆಗೆ ಬರುತ್ತಿದ್ದ ಕಾರು, ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗೆ ಸಂಪರ್ಕಿಸುವ ಚಾರ್ಮಾಡಿ ಘಾಟ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಂಡೆ ಕಲ್ಲಿಗೆ ಗುದ್ದಿದೆ. ಪರಿಣಾಮ ಕಾರಿನಲ್ಲಿದ್ದ ನಾಲ್ವರಲ್ಲಿ ಓರ್ವ ಮಹಿಳೆಗೆ ತೀವ್ರವಾಗಿ ಪೆಟ್ಟಾಗಿದ್ದು, ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನುಳಿದವರಿಗೆ ಸಣ್ಣ ಪುಟ್ಟ ಪೆಟ್ಟಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇದನ್ನೂ ಓದಿ; ಪಿಯುಸಿ ಪಾಸ್ ಆದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;10,000 ಸ್ಕಾಲರ್ ಶಿಪ್ ನೇರ ನಿಮ್ಮ ಬ್ಯಾಂಕ್ ಖಾತೆಗೆ
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬಣಕಲ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. (ವರದಿ- ತನು ಕೊಟ್ಟಿಗೆಹಾರ)
ಇದನ್ನೂ ಓದಿ; ಇನ್ಮುಂದೆ DL ಪಡೆಯುವುದು ಬಹಳ ಸುಲಭ; ಬರಲಿದೆ ಈ ಹೊಸ ನಿಯಮ















