ಲೋಕಸಭೆ ಚುನಾವಣೆ: ಕೊಟ್ಟಿಗೆಹಾರ ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣೆ

ಕೊಟ್ಟಿಗೆಹಾರ: (ನ್ಯೂಸ್ ಮಲ್ನಾಡ್ ವರದಿ) ಲೋಕಸಭೆ ಚುನಾವಣೆಯ ಹಿನ್ನಲೆಯಲ್ಲಿ ನೀತಿ ಸಂಹಿತೆ ಜಾರಿಯ ಮೇರೆಗೆ ಚುನಾವಣೆಯ ಕರ್ತವ್ಯದಲ್ಲಿ ನಿಯೋಜನೆಗೊಂಡಿರುವ ಅಧಿಕಾರಿಗಳು ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಚೆಕ್ ಪೋಸ್ಟ್ ಸೇರಿದಂತೆ ಹಲವು ಸೂಕ್ಷ್ಮ ಗಡಿ ಪ್ರದೇಶದಲ್ಲಿ ಬರುವ ಎಲ್ಲಾ ವಾಹನಗಳ ತಪಾಸಣೆ ನಡೆಸಿ ಮಾಹಿತಿ ಕಲೆ ಹಾಕಲಾಗುತ್ತಿದೆ.

 

ಇದನ್ನೂ ಓದಿ; ರಾಜ್ಯ ಸರ್ಕಾರದ ಕೃಷಿ ಭಾಗ್ಯ ಯೋಜನೆ; ಈ ಯೋಜನೆಯಲ್ಲಿ ನಿಮಗೂ ಸಹ ಹಣ ಸಿಗುತ್ತಾ?

ಈ ಕುರಿತು ಚುನಾವಣಾ ತಂಡದ ಅಧಿಕಾರಿ ಮುಖ್ಯಸ್ಥ ಶಿವಕುಮಾರ್ ಮಾತನಾಡಿ, ಚುನಾವಣೆಗೆ ಹಲವು ಇಲಾಖೆಗಳಿಂದ ವಿವಿಧ ಅಧಿಕಾರಿಗಳನ್ನು ನಿಯೋಜನೆ ಮಾಡಲಾಗಿದೆ. ಕೊಟ್ಟಿಗೆಹಾರ ಚೆಕ್ ಪೋಸ್ಟ್ ಗಳಲ್ಲಿ ಮೂರು ಪಾಳೆಯದಲ್ಲಿ ಸಿಬ್ಬಂದಿಗಳು ಹಾಗೂ ಪೊಲೀಸರು ಕರ್ತವ್ಯ ನಿರ್ವಹಿಸುತ್ತಿದ್ದು, ಹಗಲು ರಾತ್ರಿ ವಾಹನಗಳ ತಪಾಸಣೆ ನಡೆಸಲಾಗುತ್ತಿದೆ. ಹೆಚ್ಚಿನ ಹಣವನ್ನು ಕೊಂಡೊಯ್ಯುವಂತಿಲ್ಲ 50 ಸಾವಿರದವರೆಗೆ ದಾಖಲೆ ತೋರಿಸಿ ಹಣ ಕೊಂಡೊಯ್ಯಲು ಅವಕಾಶವಿದೆ. ದಾಖಲೆ ರಹಿತ ಹಣವನ್ನು ಸೀಜ್ ಮಾಡಲಾಗುತ್ತದೆ. ಹಾಗಾಗಿ ಚುನಾವಣಾ ಕರ್ತವ್ಯದಲ್ಲಿರುವ ಸಿಬ್ಬಂದಿಗಳೊಂದಿಗೆ ಪ್ರವಾಸಿಗರು, ಸಾರ್ವಜನಿಕರು ಸಹಕರಿಸಬೇಕು ಎಂದರು.

ಇದನ್ನೂ ಓದಿ; ನಿರುದ್ಯೋಗಿಗಳಿಗೆ ಗುಡ್ ನ್ಯೂಸ್; ಉಚಿತ ಸಿಸಿಟಿವಿ ಅಳವಡಿಕೆ ತರಬೇತಿಗೆ ಅರ್ಜಿ ಆಹ್ವಾನ

ಈ ಸಂದರ್ಭದಲ್ಲಿ ಬಣಕಲ್ ಪೊಲೀಸ್ ಸಬ್ ಇನ್ ಸ್ಪೆಕ್ಟರ್ ಕೌಶಿಕ್, ಅಪರಾಧ ವಿಭಾಗದ ಸಬ್ ಇನ್ ಸ್ಪೆಕ್ಟರ್ ಎನ್. ಕೆ ಓಮನ, ಸಿಬ್ಬಂದಿಗಳಾದ ಜಗದೀಶ್, ನವೀನ್, ವರ್ಷಿಣಿ, ಹೋಂ ಗಾರ್ಡ್ ಚೇತನ್, ಚುನಾವಣಾ ಕರ್ತವ್ಯದ ಅಧಿಕಾರಿಗಳಾದ ಬಿ.ಎಸ್ ಮರುಳಸಿದ್ದಪ್ಪ, ಯಶವಂತರಾಜ್, ಗಿರೀಶ್ ಇದ್ದರು

ಇದನ್ನೂ ಓದಿ; ಬೆಳಗಾವಿ ನ್ಯಾಯಾಲಯದಲ್ಲಿ ಉದ್ಯೋಗ; 10th, 12th ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ

ಕೊಟ್ಟಿಗೆಹಾರ ಚೆಕ್ ಪೋಸ್ಟ್ ನಲ್ಲಿ ದಾಖಲೆ ರಹಿತ ಹಣ ಸೀಜ್:
ಬೆಂಗಳೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ಕಾರಿನಲ್ಲಿ ಬೆಂಗಳೂರು ಮೂಲದ ಸುಬ್ಬಲಕ್ಷ್ಮಿ ಅವರ ಬಳಿ 1 ಲಕ್ಷ ಹಣ ದೊರೆತಿದ್ದು, ದಾಖಲೆ ಇಲ್ಲದ ಕಾರಣ ಅಧಿಕಾರಿಗಳು ಸೀಜ್ ಮಾಡಿದ್ದಾರೆ. ಇನ್ನು ಸುಬ್ಬಲಕ್ಪ್ಮಿ ಅವರು ಮನೆ ಖರೀದಿಗೆಂದು ಹಣ ತೆಗೆದುಕೊಂಡು ಹೋಗಿದ್ದರು. ಉಳಿದ ಹಣವನ್ನು ತನ್ನ ಬಳಿಯಲ್ಲಿ ಇಟ್ಟುಕೊಂಡಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. (ವರದಿ- ತನು ಕೊಟ್ಟಿಗೆಹಾರ)

ಕಡೂರು: ತುಂಡಾಗಿ ಬಿದ್ದ ವಿದ್ಯುತ್ ತಂತಿ: ಹೊತ್ತಿ ಉರಿದ ಮನೆ

ಕಡೂರು: (ನ್ಯೂಸ್ ಮಲ್ನಾಡ್ ವರದಿ) ಮನೆ ಮೇಲೆ ತುಂಡಾಗಿ ವಿದ್ಯುತ್ ತಂತಿ ಬಿದ್ದ ಪರಿಣಾಮ ಮನೆಹೊತ್ತಿ ಉರಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬ್ಯಾಗಡೇಹಳ್ಳಿ ಗ್ರಾಮದಲ್ಲಿ ನಡೆದಿದೆ.

ಇದನ್ನೂ ಓದಿ; ರೈತರಿಗೆ ಸಿಹಿ ಸುದ್ದಿ!; ಈ ಯೋಜನೆ ಮೂಲಕ ರೈತರಿಗೆ ಸಿಗಲಿದೆ 90% ವರೆಗೆ ಸಬ್ಸಿಡಿ ಹಣ

ಮನೆಯವರು ತೋಟಕ್ಕೆ ಹೋಗಿದ್ದಾಗ ಈ ದುರ್ಘಟನೆ ಸಂಭವಿಸಿದ್ದು, ಮಂಜಮ್ಮ, ಚಂದ್ರಪ್ಪ ಎಂಬುವರ ಮನೆ ಬೆಂಕಿಯಿಂದ ಸಂಪೂರ್ಣ ಹಾನಿಯಾಗಿ, ಗೃಹಪಯೋಗಿ ವಸ್ತುಗಳು ಬೆಂಕಿಗಾಹುತಿಯಾಗಿದೆ. ಅದೃಷ್ಟವಶಾತ್ ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಈ ಅವಘಡ ಸಂಭವಿಸಿದೆ.

ಇದನ್ನೂ ಓದಿ; ಸ್ವಂತ ಕೃಷಿ ಭೂಮಿ ಹೊಂದಿರೋ ರೈತರಿಗೆ ಗುಡ್ ನ್ಯೂಸ್; ಸರ್ಕಾರದಿಂದ ಸಿಗುತ್ತೆ 25,000 ಹಣ! ಈಗಲೇ ಅರ್ಜಿ ಸಲ್ಲಿಸಿ

ಸ್ಥಳಿಯರು ಹಾಗೂ ಅಗ್ನಿಶಾಮಕ ತಂಡದಿಂದ ಬೆಂಕಿ ನಂದಿಸಿದ್ದು. ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಕಾಫಿನಾಡು ಚಿಕ್ಕಮಗಳೂರು ಹುಟ್ಟೂರು. ಬರವಣಿಗೆ, ಪ್ರವಾಸ ಆಸಕ್ತ ವಿಷಯಗಳು. ಕನ್ನಡ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಸುಮಾರು 5 ವರ್ಷಗಳ ಅನುಭವ.