ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯ ಬಿದಿರುತಳ ಬಳಿ ಭಾನುವಾರ KSRTC ಬಸ್ ಮತ್ತು ಕಾರಿನ ನಡುವೆ ಭೀಕರ ಮುಖಾಮುಖಿ ಡಿಕ್ಕಿ ಸಂಭವಿಸಿ, ಕಾರಿನಲ್ಲಿದ್ದ ನಾಲ್ವರಿಗೆ ಗಂಭೀರ ಗಾಯಗಳಾಗಿವೆ.
ಇದನ್ನೂ ಓದಿ: ರೈತರಿಗೆ ಗುಡ್ ನ್ಯೂಸ್!; ಕೃಷಿ ಉಪಕರಣ ಖರೀದಿಗೆ 50% ಸಬ್ಸಿಡಿ

ಧರ್ಮಸ್ಥಳದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ KSRTC ಬಸ್ ಹಾಗೂ ಚಿಕ್ಕನಾಯಕನ ಹಳ್ಳಿಯಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರು, ಘಾಟಿಯ ತಿರುವಿನಲ್ಲಿ ಪರಸ್ಪರ ಡಿಕ್ಕಿ ಹೊಡೆದಿದೆ. ಅಪಘಾತದಿಂದ ಕಾರು ಸಂಪೂರ್ಣವಾಗಿ ಹಾನಿಗೊಳಗಾಗಿದೆ.
ಗಾಯಗೊಂಡ ನಾಲ್ವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಪರಿಣಾಮವಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲವು ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. (ವರದಿ- ತನು ಕೊಟ್ಟಿಗೆಹಾರ)
ಇದನ್ನೂ ಓದಿ: ರೈಲ್ವೆ NTPC ಗ್ರಾಜುವೇಟ್ ನೇಮಕಾತಿ; 30,307 ಹುದ್ದೆಗೆ ಅರ್ಜಿ ಆಹ್ವಾನ












