ಚಾರ್ಮಾಡಿ ಘಾಟಿಯ ಹಲವೆಡೆ ಅಪಾಯದ ಸ್ಥಿತಿ

ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಚಾರ್ಮಾಡಿ ಘಾಟಿಯ ಚಿಕ್ಕಮಗಳೂರು ವಿಭಾಗದ ಹಲವು ಕಡೆ ರಸ್ತೆ ಬದಿ ಕಟ್ಟಿರುವ ತಡೆಗೋಡೆ ಒಡೆದಿದ್ದು, ತಡೆಗೋಡೆಗೆ ಆಧಾರವಾಗಿ ನಿರ್ಮಿಸಲಾದ ಹಿಂಬದಿ ಗೋಡೆ ಕುಸಿಯುವ ಭೀತಿ ಎದುರಾಗಿದೆ.


ಇದನ್ನೂ ಓದಿ: 10th ಪಾಸ್ ಆದ ವಿದ್ಯಾರ್ಥಿಗಳಿಗೆ ತಿಂಗಳಿಗೆ ಸಿಗಲಿದೆ 3,500 ಸ್ಕಾಲರ್ ಶಿಪ್; ಈ ರೀತಿ ಅರ್ಜಿ ಸಲ್ಲಿಸಿ


ಕಳೆದ ಬೇಸಿಗೆ ಕಾಲದಲ್ಲಿ ಚಾರ್ಮಾಡಿ ಘಾಟಿ ಪರಿಸರದಲ್ಲಿ ಕಟ್ಟುತ್ತಿದ್ದ ತಡೆಗೋಡೆಗಳ ಬಹು ಅಂಶ ಕಾಮಗಾರಿ ಪೂರ್ಣಗೊಂಡಿದೆ. ಈ ತಡೆಗೋಡೆ ಕಟ್ಟಿರುವ ಸುಮಾರು ಆರರಿಂದ ಏಳು ಸ್ಥಳಗಳಲ್ಲಿ ಗೋಡೆಯ ಬದಿ ಹಾಕಿರುವ ಮಣ್ಣು, ಮಳೆ ನೀರಿನಲ್ಲಿ ಕೊಚ್ಚಿ ಹೋಗಿದ್ದು, ಗೋಡೆ ವಾಲುವ ಹಂತದಲ್ಲಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಕೋಟ್ಯಾಂತರ ರೂಪಾಯಿ ಅನುದಾನದ ಕಾಮಗಾರಿ ಘಾಟಿ ವಿಭಾಗದಲ್ಲಿ ಕಳೆದ ಹಲವು ವರ್ಷಗಳಿಂದ ನಡೆಯುತ್ತಿದ್ದು, ಮಳೆಗಾಲ ಆರಂಭಕ್ಕೆ ಘಾಟಿಯ ಪರಿಸ್ಥಿತಿ ಹೀಗಾಗಿದೆ. ಮುಂದಿನ ದಿನಗಳಲ್ಲಿ ಮಳೆ ಇನ್ನಷ್ಟು ಹೆಚ್ಚಲಿದ್ದು, ಇದು ಹೀಗೆ ಮುಂದುವರಿದರೆ ಅಪಾಯ ಕಟ್ಟಿಟ್ಟ ಬುತ್ತಿ.


ಇದನ್ನೂ ಓದಿ: ಪಿಯುಸಿ ವಿದ್ಯಾರ್ಥಿಗಳಿಗೆ ತಿಂಗಳಿಗೆ ಸಿಗಲಿದೆ 3,200 ಸ್ಕಾಲರ್ ಶಿಪ್; ಈ ರೀತಿ ಅರ್ಜಿ ಸಲ್ಲಿಸಿ


ತಡೆಗೋಡೆ ಪ್ರದೇಶದಲ್ಲಿ ಚರಂಡಿ ಇಲ್ಲದ ಕಾರಣ ಮಳೆ ನೀರು ಘಾಟಿಯ ರಸ್ತೆಯಲ್ಲಿ ಹರಿಯುತ್ತಿದ್ದು, ತಡೆಗೋಡೆಗಳ ಸಮೀಪದಿಂದಲೇ ಕಣಿವೆ ಭಾಗಕ್ಕೆ ಇಳಿಯುತ್ತಿದೆ. ಹಿಂಬದಿ ಕಟ್ಟಿರುವ ಗೋಡೆ ಮೂಲಕ ಕಣಿವೆ ಪ್ರದೇಶಕ್ಕೆ ಹರಿದು ಗೋಡೆಯ ಮಣ್ಣು ಸವಕಳಿಗೊಳ್ಳುತ್ತಿದೆ. ಇಲ್ಲಿ ಕೆಲವೆಡೆ ಈಗಾಗಲೇ ಮರಳಿನ ಚೀಲ ಟಾರ್ಪಾಲಿನ್ ಹಾಕಿದ್ದರು ಅದು ಸಂಪೂರ್ಣ ತಡೆಯಾಗಲು ಸಾಧ್ಯವಿಲ್ಲ.


ಇದನ್ನೂ ಓದಿ: 9 ರಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್; ತಿಂಗಳಿಗೆ ಸಿಗಲಿದೆ 1,000 ಸ್ಕಾಲರ್ ಶಿಪ್; ಈ ರೀತಿ ಅರ್ಜಿ ಸಲ್ಲಿಸಿ


ರಸ್ತೆಯಲ್ಲಿ ಬಿರುಕು:
ಇನ್ನು ಘಾಟಿಯ ಚಿಕ್ಕಮಗಳೂರು ವಿಭಾಗದ ಐದರಿಂದ ಆರು ಕಡೆಗಳಲ್ಲಿ ಘಾಟಿಯ ರಸ್ತೆ ಮಧ್ಯೆ ಬಿರುಕುಗಳು ಕಂಡು ಬಂದಿದೆ. ಇನ್ನೊಂದೆಡೆ ರಸ್ತೆ ಬಿರುಕುಗಳ ಮೂಲಕ ನೀರು ಇಳಿಯುತ್ತಿದೆ. ಇದು ಇನ್ನಷ್ಟು ಕುಸಿತಕ್ಕೆ ಕಾರಣವಾಗಬಹುದು. ಒಟ್ಟಿನಲ್ಲಿ ಘಾಟಿಯ ಚಿಕ್ಕಮಗಳೂರು ವಿಭಾಗದ ಹಲವೆಡೆ ಸಮಸ್ಯೆ ಕಂಡು ಬಂದಿದೆ.


ಇದನ್ನೂ ಓದಿ: SSLC ಪಾಸ್ ಆದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ತಿಂಗಳಿಗೆ ಸಿಗಲಿದೆ 3,500 ಸ್ಕಾಲರ್ ಶಿಪ್; ಈ ರೀತಿ ಅರ್ಜಿ ಸಲ್ಲಿಸಿ


ರಾತ್ರಿ ಅಪಾಯ ಹೆಚ್ಚು:
ಒಂದೆಡೆ ಘಾಟಿಯಲ್ಲಿ ಮಳೆ ಮತ್ತು ಮಂಜು ಮುಸುಕಿದ ವಾತಾವರಣವಿದ್ದು, ರಾತ್ರಿ ವೇಳೆ ಸಂಚರಿಸುವಾಗ ತೀರ ಎಚ್ಚರ ಅಗತ್ಯ. ಬಿರುಕು ಬಿಟ್ಟಿರುವ ತಡೆಗೋಡೆ ಒಡೆದಿರುವ ರಸ್ತೆ ಸ್ಥಳಗಳು ರಾತ್ರಿ ಗಮನಕ್ಕೆ ಬರಲು ಕಷ್ಟವಾಗುವುದರಿಂದ ಅಪಾಯಗಳು ಸಂಭವಿಸುವ ಸಾಧ್ಯತೆ ಇದೆ. ಘಾಟಿಯ ಜಲಪಾತ ತೊರೆ, ಹಳ್ಳಗಳು ತುಂಬಿ ಹರಿಯುತ್ತಿದ್ದು, ಘಾಟಿಯ ಸಂಪೂರ್ಣ ಪ್ರದೇಶದಲ್ಲಿ ಸಾಕಷ್ಟು ನೀರು ಹರಿದು ಹೋಗುತ್ತಿದೆ. ನೀರಿನ ರಭಸಕ್ಕೆ ಮಣ್ಣು ಇನ್ನಷ್ಟು ಸವಕಳಿಗೊಳ್ಳುವ ಸಾಧ್ಯತೆ ಇದೆ. ಒಟ್ಟಿನಲ್ಲಿ ಘಾಟಿ ಪ್ರದೇಶದಲ್ಲಿ ಸಂಚರಿಸುವಾಗ ಸಾಕಷ್ಟು ಮುನ್ನೆಚ್ಚರಿಕೆ ವಹಿಸುವುದು ಅಗತ್ಯವಾಗಿದೆ. (ವರದಿ- ತನು ಕೊಟ್ಟಿಗೆಹಾರ)


ಇದನ್ನೂ ಓದಿ: ದ್ವಿತೀಯ ಪಿಯುಸಿ ಪಾಸ್ ಆದ ವಿದ್ಯಾರ್ಥಿಗಳಿಗೆ ತಿಂಗಳಿಗೆ ಸಿಗಲಿದೆ 6000 ಸ್ಕಾಲರ್ ಶಿಪ್; ಈ ರೀತಿ ಅರ್ಜಿ ಸಲ್ಲಿಸಿ


ಮಲೆನಾಡಿನಲ್ಲಿ ಧಾರಾಕಾರ ಮಳೆ: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಕಾರು
ಮೂಡಿಗೆರೆ:  (ನ್ಯೂಸ್ ಮಲ್ನಾಡ್ ವರದಿ) ಮಲೆನಾಡಿನಲ್ಲಿ ಧಾರಾಕಾರ ಮಳೆ ಮುಂದುವರೆದಿದ್ದು ಗುಡ್ಡ ಕುಸಿತ, ವಾಹನ ಅಪಘಾತದಂತಹ ಪ್ರಕರಣಗಳು ಸಂಭವಿಸುತ್ತಿವೆ.

ಇಂದು ಮೂಡಿಗೆರೆ ತಾಲ್ಲೂಕಿನ ಬಿದ್ರಹಳ್ಳಿ ಸಮೀಪ ಎರ್ಟಿಗ ವಾಹನವೊಂದು ಪಲ್ಟಿಯಾದ ಘಟನೆ ಸಂಭವಿಸಿದೆ.

ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿ ನೀರು ನಿಂತ ಕಾರಣದಿಂದ ಚಾಲಕನ ನಿಯಂತ್ರಣ ತಪ್ಪಿ ವಾಹನವು ಪಲ್ಟಿ ಹೊಡೆದಿದೆ.

ಕೊಡಗಿನ ಸೋಮವಾರಪೇಟೆಯಿಂದ ಕಳಸಕ್ಕೆ ಬರುತ್ತಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದ್ದು, ಮೂವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.