ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ನದಿಯ ದಡದಲ್ಲಿ ವಿದ್ಯುತ್ ತಂತಿ ತುಂಡಾಗಿ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ನಡೆದಿದೆ.
ವಿದ್ಯುತ್ ತಂತಿ ತಗುಲಿ ಸಂತೋಷ(28) ಮೃತ ದುರ್ದೈವಿ. ಹೆಂಡತಿ ಮತ್ತು ಸಂಬಂಧಿಕರ ಜೊತೆಗೆ ಬಟ್ಟೆ ತೊಳೆಯಲು ಹೇಮಾವತಿ ನದಿಗೆ ತೆರಳದಾಗ ಈ ದುರ್ಘಟನೆ ಸಂಭವಿಸಿದೆ.

ಇದನ್ನೂ ಓದಿ: ರೈತರಿಗೆ ಸಿಹಿ ಸುದ್ದಿ ಕೊಟ್ಟ ರಾಜ್ಯ ಸರ್ಕಾರ; ಬೆಂಬಲ ಬೆಲೆ ಯೋಜನೆಯಡಿಯಲ್ಲಿ ವಿವಿಧ ಬೆಳೆಗಳ ಖರೀದಿ ಅವಧಿ ವಿಸ್ತರಣೆ

ಮೃತ ಸಂತೋಷ ಮೂಲತಃ ಹಾಸನ ಜಿಲ್ಲೆಯ ಬೇರೂರು ತಾಲೂಕಿನ ಚಿಕ್ಕನಹಳ್ಳಿ ಗ್ರಾಮದ ನಿವಾಸಿಯಾಗಿದ್ದು, ಹಿಂದೆ ಗುತ್ತಿಗೆ ಆಧಾರದಲ್ಲಿ ಲೈನ್ ಮ್ಯಾನ್ ಆಗಿದ್ದರು. ಕಳೆದ ನಾಲ್ಕು ದಿನಗಳ ಹಿಂದೆ ಲೈನ್ ಮ್ಯಾನ್ ಕೆಲಸವನ್ನು ಬಿಟ್ಟಿದ್ದರು. ಪತ್ನಿಯ ಜೊತೆ ಸಂಬಂಧಿಕರ ಮನೆಗೆ ಬಂದಾಗ ಈ ಘಟನೆ ನಡೆದಿದೆ.
ಗೋಣಿಬೀಡು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೆಸ್ಕಾಂ ಇಲಾಖೆಯ ನಿರ್ಲಕ್ಷ್ಯದಿಂದ ಸಂತೋಷ ಸಾವನ್ನಪ್ಪಿದ್ದಾರೆ ಎಂದು ಸ್ಥಳಿಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.













