ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಕಾಡಾನೆ ಹಾವಳಿಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಬೆಳೆ ನಾಶವಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ರಸ್ತೆ ಪಕ್ಕದ ತರುವೆ ಗ್ರಾಮದಲ್ಲಿ ನಡೆದಿದೆ.
ಇದನ್ನೂ ಓದಿ; ರಾಜ್ಯ ಸರ್ಕಾರದ ಕೃಷಿ ಭಾಗ್ಯ ಯೋಜನೆ; ಈ ಯೋಜನೆಯಲ್ಲಿ ನಿಮಗೂ ಸಹ ಹಣ ಸಿಗುತ್ತಾ?

ಗ್ರಾಮದ ನವೀನ್ ಎಂಬುವವರ ತೋಟಕ್ಕೆ ಕಾಡಾನೆ ನುಗ್ಗಿ ಅಡಿಕೆ, ಬಾಳೆ, ಕಾಫಿ, ಮೆಣಸು ಸೇರಿದಂತೆ ಲಕ್ಷಾಂತರ ರೂಪಾಯಿ ಮೌಲ್ಯದ ಬೆಳೆ ನಾಶವಾಗಿದೆ. ಕಾಡಾನೆ ಹಾವಳಿಯಿಂದಾಗಿ ತೋಟದ ಕೆಲಸಕ್ಕೆ ಕೂಲಿಗೆ ಬರಲು ಕಾರ್ಮಿಕರು ಹಿಂದೇಟು ಹಾಕುತ್ತಿರುವುದರಿಂದ ಬೆಳೆಗಾರರು ಕಂಗಾಲಾಗಿದ್ದಾರೆ.
ಇದನ್ನೂ ಓದಿ; ನಿರುದ್ಯೋಗಿಗಳಿಗೆ ಗುಡ್ ನ್ಯೂಸ್; ಉಚಿತ ಸಿಸಿಟಿವಿ ಅಳವಡಿಕೆ ತರಬೇತಿಗೆ ಅರ್ಜಿ ಆಹ್ವಾನ
ಕಳೆದ 3-4 ತಿಂಗಳಿಂದ ಮೂಡಿಗೆರೆಯಲ್ಲಿ ನಿರಂತರ ಕಾಡಾನೆ ದಾಳಿ ನಡೆಯುತ್ತಿದ್ದು, ರಾಜ್ಯ ಸರ್ಕಾರ ಹಾಗೂ ಅರಣ್ಯ ಇಲಾಖೆ ವಿರುದ್ಧ ಮೂಡಿಗೆರೆ ಜನರ ಆಕ್ರೋಶ ಹೊರಹಾಕಿದ್ದಾರೆ.
ಇದನ್ನೂ ಓದಿ; ಬೆಳಗಾವಿ ನ್ಯಾಯಾಲಯದಲ್ಲಿ ಉದ್ಯೋಗ; 10th, 12th ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
ಕಡೂರು: ತುಂಡಾಗಿ ಬಿದ್ದ ವಿದ್ಯುತ್ ತಂತಿ: ಹೊತ್ತಿ ಉರಿದ ಮನೆ
ಕಡೂರು: (ನ್ಯೂಸ್ ಮಲ್ನಾಡ್ ವರದಿ) ಮನೆ ಮೇಲೆ ತುಂಡಾಗಿ ವಿದ್ಯುತ್ ತಂತಿ ಬಿದ್ದ ಪರಿಣಾಮ ಮನೆಹೊತ್ತಿ ಉರಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬ್ಯಾಗಡೇಹಳ್ಳಿ ಗ್ರಾಮದಲ್ಲಿ ನಡೆದಿದೆ.
ಇದನ್ನೂ ಓದಿ; ರೈತರಿಗೆ ಸಿಹಿ ಸುದ್ದಿ!; ಈ ಯೋಜನೆ ಮೂಲಕ ರೈತರಿಗೆ ಸಿಗಲಿದೆ 90% ವರೆಗೆ ಸಬ್ಸಿಡಿ ಹಣ
ಮನೆಯವರು ತೋಟಕ್ಕೆ ಹೋಗಿದ್ದಾಗ ಈ ದುರ್ಘಟನೆ ಸಂಭವಿಸಿದ್ದು, ಮಂಜಮ್ಮ, ಚಂದ್ರಪ್ಪ ಎಂಬುವರ ಮನೆ ಬೆಂಕಿಯಿಂದ ಸಂಪೂರ್ಣ ಹಾನಿಯಾಗಿ, ಗೃಹಪಯೋಗಿ ವಸ್ತುಗಳು ಬೆಂಕಿಗಾಹುತಿಯಾಗಿದೆ. ಅದೃಷ್ಟವಶಾತ್ ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಈ ಅವಘಡ ಸಂಭವಿಸಿದೆ.
ಇದನ್ನೂ ಓದಿ; ಸ್ವಂತ ಕೃಷಿ ಭೂಮಿ ಹೊಂದಿರೋ ರೈತರಿಗೆ ಗುಡ್ ನ್ಯೂಸ್; ಸರ್ಕಾರದಿಂದ ಸಿಗುತ್ತೆ 25,000 ಹಣ! ಈಗಲೇ ಅರ್ಜಿ ಸಲ್ಲಿಸಿ
ಸ್ಥಳಿಯರು ಹಾಗೂ ಅಗ್ನಿಶಾಮಕ ತಂಡದಿಂದ ಬೆಂಕಿ ನಂದಿಸಿದ್ದು. ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.












