ಮೂಡಿಗೆರೆ: ಕಾಡಾನೆ ದಾಳಿ: ರೈತನಿಗೆ ಗಂಭೀರ ಗಾಯ

ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೃಷ್ಣಾಪುರ ಗ್ರಾಮದಲ್ಲಿ ಮಂಗಳವಾರ ರಾತ್ರಿ ಒಂಟಿ ಸಲಗ ದಾಳಿಯಿಂದ ರೈತರೊಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ.


ಇದನ್ನೂ ಓದಿ: ರೈತರಿಗೆ ಗುಡ್ ನ್ಯೂಸ್!; ಕೃಷಿ ಉಪಕರಣ ಖರೀದಿಗೆ 50% ಸಬ್ಸಿಡಿ


ರಾತ್ರಿ ಮನೆಯಿಂದ ಹೊರಬಂದ ವೇಳೆ ಫಿಲಿಪ್ (65) ಎಂಬ ರೈತನ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ದಾಳಿಯಿಂದ ಅವರ ಕಾಲು, ಎದೆ ಹಾಗೂ ಕೈಭಾಗಕ್ಕೆ ಗಂಭೀರ ಗಾಯವಾಗಿದ್ದು, ಅವರನ್ನು ತಕ್ಷಣವೇ ಚಿಕ್ಕಮಗಳೂರು ಮಲ್ಲೇಗೌಡ ಸರ್ಕಾರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗ್ರಾಮದ ಕಾಫಿ ತೋಟಗಳಲ್ಲಿ ಈಗಾಗಲೇ ಸುಮಾರು 35 ಕಾಡಾನೆಗಳು ಬೀಡುಬಿಟ್ಟಿದ್ದು, ಇವು ನಿರಂತರವಾಗಿ ವಸತಿ ಪ್ರದೇಶಗಳಲ್ಲಿ ಸಂಚರಿಸುತ್ತಿರುವುದರಿಂದ ಗ್ರಾಮಸ್ಥರಲ್ಲಿ ಭೀತಿ ಹೆಚ್ಚಾಗಿದೆ. ಘಟನೆ ಬಳಿಕ ಮಧ್ಯರಾತ್ರಿ 2.30ರ ಹೊತ್ತಿಗೆ ಮೂಡಿಗೆರೆ ಅರಣ್ಯ ವಲಯ ರೇಂಜರ್ ಕಾವ್ಯ ಅವರ ನೇತೃತ್ವದಲ್ಲಿ ಅರಣ್ಯ ಇಲಾಖೆ ತಂಡ ತಕ್ಷಣ ಸ್ಥಳಕ್ಕೆ ಧಾವಿಸಿದ್ರು.


ಇದನ್ನೂ ಓದಿ: ರೈಲ್ವೆ NTPC ಗ್ರಾಜುವೇಟ್ ನೇಮಕಾತಿ; 30,307 ಹುದ್ದೆಗೆ ಅರ್ಜಿ ಆಹ್ವಾನ


ಗ್ರಾಮಸ್ಥರು ಹಲವು ಬಾರಿ ಕಾಡಾನೆಗಳನ್ನು ಸೆರೆಹಿಡಿಯಲು ಮನವಿ ಮಾಡಿದ್ದರೂ ಸಮಸ್ಯೆ ಇನ್ನೂ ಬಗೆಹರಿಯದೇ ಉಳಿದಿದೆ. ಗ್ರಾಮಸ್ಥರ ಭಯ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಾಡಾನೆಗಳ ನಿಯಂತ್ರಣ ಹಾಗೂ ಸ್ಥಳಾಂತರಕ್ಕೆ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದಾರೆ. (ವರದಿ – ತನು ಕೊಟ್ಟಿಗೆಹಾರ)

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.