ಮೂಡಿಗೆರೆ: ಉಚಿತ ಆರೋಗ್ಯ ಮತ್ತು ನೇತ್ರ ತಪಾಸಣೆ ಶಿಬಿರ

ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಸಾಯಿಕೃಷ್ಣ ಹೆಲ್ತ್ ಸೆಂಟರ್ ಬಣಕಲ್, ಬಿ.ವಿ.ಕೆ ಇರ್ವತ್ರಾಯ ಮೆಮೋರಿಯಲ್ ಚಾರಿಟೆಬಲ್ ಫೌಂಡೇಶನ್(ರಿ) ಹಾಗೂ ಯೆನೆಪೋಯ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಂಗಳೂರು, ಇವರ ಸಂಯುಕ್ತ ಆಶ್ರಯದಲ್ಲಿ ಉಚಿತ ಆಯುರ್ವೇದ ಆರೋಗ್ಯ ತಪಾಸಣಾ ಶಿಬಿರ ಮತ್ತು ಉಚಿತ ನೇತ್ರ ತಪಾಸಣೆ ಶಿಬಿರವು ಸಾಯಿ ಕೃಷ್ಣ ಹೆಲ್ತ್ ಸೆಂಟರ್ ಬಣಕಲ್ ನಲ್ಲಿ ನಡೆಯಿತು.

 

ಇದನ್ನೂ ಓದಿ; SSLC ಪಾಸ್ ಆದವರಿಗೆ ಗುಡ್ ನ್ಯೂಸ್; SSC GD ಕಾನ್ಸ್‌ ಟೇಬಲ್ ಗೆ ಅರ್ಜಿ ಆಹ್ವಾನ

ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಡಿಗೆರೆ ವಲಯ ನಿರ್ದೇಶಕರಾದ ಶಿವಾನಂದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಇಂತಹ ಆರೋಗ್ಯ ಶಿಬಿರವು ಜನರಲ್ಲಿ ಆರೋಗ್ಯದ ಬಗ್ಗೆ ಅರಿವು ಮೂಡಿಸಲು ಜನರು ಆರೋಗ್ಯವಂತರಾಗಿರಲು ಉಪಯುಕ್ತವಾಗಿದೆ. ಸಾಯಿ ಕೃಷ್ಣ ಹೆಲ್ತ್ ಸೆಂಟರ್ ಬಣಕಲ್ ಭಾಗದ ಜನರಿಗೆ ತುರ್ತು ಚಿಕಿತ್ಸೆ ನೀಡಲು ಸಹಕಾರಿಯಾಗಿದೆ. ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ.ಮುರಳಿಕೃಷ್ಣ ಇರ್ವತ್ರಾಯ ಮತ್ತು ಆಡಳಿತ ನಿರ್ದೇಶಕರಾದ ನವೀನ್ ಭಟ್ ಇವರ ಕಾರ್ಯವು ಸಮಾಜಮುಖಿಯಾದದ್ದು ಎಂದರು.

ಇದನ್ನೂ ಓದಿ; ಇನ್ನೂ ಆಧಾರ್ ಕಾರ್ಡ್ Update ಮಾಡಿಸಿಲ್ವಾ;  ಉಚಿತವಾಗಿ ಅಪ್ ಡೇಟ್ ಮಾಡಲು ಕೆಲವೇ ದಿನ ಬಾಕಿ; ಹೇಗೆ ಅಪ್ ಡೇಟ್ ಮಾಡುವುದು? ತಪ್ಪದೆ ಇದನ್ನು ಓದಿ

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಆಸ್ಪತ್ರೆಯ ಆಡಳಿತ ನಿರ್ದೇಶಕರಾದ ನವೀನ್ ಭಟ್, ಬಣಕಲ್ ಹಾಗೂ ಸುತ್ತಲಿನ ಜನರಿಗೆ ಅನಾರೋಗ್ಯದ ತುರ್ತು ಸಂದರ್ಭದಲ್ಲಿ ಉಪಯುಕ್ತವಾಗಲು ಆಸ್ಪತ್ರೆಯನ್ನು ಸ್ಥಾಪಿಸಿದ್ದು ಯಾವುದೇ ವ್ಯವಹಾರಿಕ ದೃಷ್ಟಿಯಿಂದ ಅಲ್ಲ. ಜನರು ಇಂತಹ ಶಿಬಿರದ ಪ್ರಯೋಜನ ಪಡೆದುಕೊಳ್ಳಬೇಕು ಎಂದರು.

 

ಇನ್ನು ಕಾರ್ಯಕ್ರಮದಲ್ಲಿ ಯೇನೆಪೋಯ ನ್ಯಚುರೊಪತಿ ಮತ್ತು ಯೋಗ ವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಡಾ.ಪುನೀತ್ ರಾಘವೇಂದ್ರ, ಯೆನೆಪೊಯ ಆಯುರ್ವೇದ ವೈದ್ಯಕೀಯ ಕಾಲೇಜು ಕೊಲ್ಲರಕೊಡಿ ನರಿಂಗಾನ ಮಂಗಳೂರು ಇಲ್ಲಿನ ಪ್ರೊಫೆಸರ್ ಡಾ.ಅಜಂತಾ ಶಿವಾಜಿ ಕೊಟೆಕಾರ್, ಲವಕುಮಾರ್, ಜ್ಯೋತಿ ವಿ ಸ್ವರೂಪ್, ಭವ್ಯ ನವೀನ್ ಭಟ್, ಆಸ್ಪತ್ರೆಯ ಸ್ಥಾನಿಕ ವೈದ್ಯರುಗಳಾದ ಡಾ.ಮೌಲ್ಯ, ಡಾ.ಮದನ್, ಡಾ.ಅಜಿತ್ ಹರಿ, ಡಾ.ಚೈತನ್ಯ, ಮ್ಯಾನೇಜರ್ ಅನಂತ್ ಪ್ರಸಾದ್, ಪಿ.ಆರ್.ಒ ಗಣೇಶ್, ಶ್ರೀ ಕೃಷ್ಣ ಯೋಗಕ್ಷೇಮ ಕೊಆರ್ಡಿನೆಟರ್ ಹೈದರ್ ಅಲಿ ಹಾಗೂ ಸಿಬ್ಬಂದಿಗಳು ಇದ್ದರು. (ವರದಿ- ತನು ಕೊಟ್ಟಿಗೆಹಾರ)

 

ಚಿಕ್ಕಮಗಳೂರು: ವಿದ್ಯುತ್ ತಂತಿಗೆ ಅಲ್ಯೂಮಿನಿಯಂ ಏಣಿ ತಗುಲಿ ಯುವಕ ಸಾವು

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ವಿದ್ಯುತ್ ತಂತಿಗೆ ಅಲ್ಯೂಮಿನಿಯಂ ಏಣಿ ತಗುಲಿ ಯುವಕ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಪಟ್ಟಣಗೆರೆ ಗ್ರಾಮದಲ್ಲಿ ನಡೆದಿದೆ. ಅಭಿಷೇಕ್ (27) ಮೃತ ಯುವಕ.

ಮೃತ ಅಭಿಷೇಕ್ ಗೆ ಮೂರು ಎಕರೆ ಅಡಿಕೆ ತೋಟವಿದ್ದು, ಅದೇ ತೋಟದಲ್ಲಿ ತೆಂಗಿನ ಮರಗಳು ಕೂಡ ಇದ್ದವು. ನ.26ರ ಭಾನುವಾರ ಸಂಜೆ ತೋಟದಲ್ಲಿ ತೆಂಗಿನಕಾಯಿ ಕೀಳಲು ಹೋದಾಗ ಈ ದುರ್ಘಟನೆ ಸಂಭವಿಸಿದೆ. ತೋಟದಲ್ಲಿ ಒಂದು ಮರದಿಂದ ಮತ್ತೊಂದು ತೆಂಗಿನ ಮರದ ಬಳಿ ಹೋಗುವಾಗ ಅಲ್ಯುಮಿನಿಯಂ ಏಣಿ ಎತ್ತಿಕೊಂಡು ಹೋಗುವಾಗ ಪ್ರೈಮರಿ ಲೈನ್ (11 ಸಾವಿರ ಕಿಲೋವ್ಯಾಟ್) ವಿದ್ಯುತ್ ತಂತಿಗೆ ಏಣಿ ತಗುಲಿ ಸಾವನ್ನಪ್ಪಿದ್ದಾನೆ. ವಿದ್ಯುತ್ ಶಾಕ್ ನಿಂದ ತೋಟದಲ್ಲೇ ಬಿದ್ದಿದ್ದ ಅಭಿಷೇಕ್ ನನ್ನು ಕೂಡಲೇ ಕಡೂರು ತಾಲೂಕು ಆಸ್ಪತ್ರೆಗೆ ದಾಖಲಿಸಿದರೂ ಕೂಡ ತೀವ್ರವಾದ ವಿದ್ಯುತ್ ಶಾಕ್ ನಿಂದ ಅಭಿಷೇಕ್ ಅಸುನೀಗಿದ್ದಾನೆ.

ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಕಾಫಿನಾಡು ಚಿಕ್ಕಮಗಳೂರು ಹುಟ್ಟೂರು. ಬರವಣಿಗೆ, ಪ್ರವಾಸ ಆಸಕ್ತ ವಿಷಯಗಳು. ಕನ್ನಡ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಸುಮಾರು 5 ವರ್ಷಗಳ ಅನುಭವ.