ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಸರ್ಕಾರಿ ಬಸ್ ಹಾಗೂ ಕಾರಿನ ನಡುವೆ ಡಿಕ್ಕಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಚಾರ್ಮಾಡಿ ಘಾಟ್ ನ ಅಲೆಕಾನ್ ಫಾಲ್ಸ್ ಬಳಿ ನಡೆದಿದೆ.
ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-25.10.2023

ಮಹೇಂದ್ರ ಎಕ್ಸಿವೋ ಮತ್ತು ಸರ್ಕಾರಿ ಬಸ್ ನಡುವೆ ಮುಖಾಮುಖಿ ಮದ್ಯ ರಸ್ತೆಯಲ್ಲಿ ಡಿಕ್ಕಿಯಾಗಿ ಮಹೇಂದ್ರ ವಾಹನದಲಿದ್ದವರಿಗೆ ಸಣ್ಣ ಪುಟ್ಟ ಗಾಯಾಗಳಾಗಿವೆ.

ಮೂಡಿಗೆರೆ ತಾಲ್ಲೂಕಿನ ಬಣಕಲ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ವರದಿ- ತನು ಕೊಟ್ಟಿಗೆಹಾರ
Khandya Temple: ಹುಲಿ ಉಗುರು ಧರಿಸಿದ್ದ ಆರೋಪದಡಿ ದೇವಸ್ಥಾನದ ಅರ್ಚಕರಿಬ್ಬರ ಬಂಧನ
ಬಾಳೆಹೊನ್ನೂರು: (ನ್ಯೂಸ್ ಮಲ್ನಾಡ್ ವರದಿ) ಹುಲಿ ಉಗುರಿನ ಡಾಲರ್ ಹಾಕಿಕೊಂಡಿದ್ದ ಆರೋಪದ ಮೇಲೆ ದೇವಸ್ಥಾನದ ಪ್ರಧಾನ ಅರ್ಚಕರಿಬ್ಬರನ್ನು ಬಂಧಿಸಿರುವ ಘಟನೆ ಚಿಕ್ಕಮಗಳೂರು ತಾಲ್ಲೂಕಿನ ಖಾಂಡ್ಯದಲ್ಲಿ ನಡೆದಿದೆ.
ಈ ಹಿಂದೆ ಇಬ್ಬರನ್ನು ಬಂಧಿಸಿದ್ದ ಅರಣ್ಯ ಇಲಾಖೆ
ಹುಲಿ ಉಗುರು ಧರಿಸಿದ್ದ ಆರೋಪದಡಿ ಮೂಡಿಗೆರೆ ತಾಲೂಕಿನ ಇಬ್ಬರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದರು. ತಾಲೂಕಿನ ಬಿ.ಹೊಸಳ್ಳಿಯ ಕುಂಡ್ರ ನಿವಾಸಿ ಸತೀಶ್ ಮತ್ತು ಹುಲ್ಲೇ ಮನೆ ಕುಂದೂರು ನಿವಾಸಿ ರಂಜಿತ್ ರನ್ನು ಬಂಧಿಸಲಾಗಿತ್ತು.
ಹುಲಿ ಉಗುರು ಧರಿಸಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಅರಣ್ಯ ಇಲಾಖೆ ಸಿಬ್ಬಂದಿ ಮೂಡಿಗೆರೆ ಕಡೆಯಿಂದ ಚಿಕ್ಕಮಗಳೂರಿಗೆ ಪ್ರಯಾಣಿಸುತ್ತಿದ್ದ ಸತೀಶ್‌ನನ್ನು ಚಿಕ್ಕಮಗಳೂರು ಸಮೀಪದ ಮತ್ತಾವರ ಅರಣ್ಯ ಮಾಹಿತಿ ಕೇಂದ್ರದ ಬಳಿ ತಡೆದು ಬಂಧಿಸಿದ್ದರು.
ಸತೀಶ್ ಕುತ್ತಿಗೆಗೆ ಧರಿಸಿದ್ದ ಬೆಳ್ಳಿ ಸರದಲ್ಲಿ ಹುಲಿ ಉಗುರು ಇರುವುದು ಪತ್ತೆಯಾಗಿದೆ. ಆರೋಪಿಯನ್ನು ವಿಚಾರಣೆಗೆ ಒಳಪಡಿಸಿದಾಗ ಹುಲಿ ಉಗುರನ್ನು ತನಗೆ ಮೂಡಿಗೆರೆ ತಾಲೂಕಿನ ಹುಲ್ಲೇ ಮನೆ ಕುಂದೂರು ನಿವಾಸಿ ರಂಜಿತ್ ನೀಡಿದ್ದು ಎಂದು ಮಾಹಿತಿ ನೀಡಿದ್ದನು. ನಂತರ ರಂಜಿತ್‌ನನ್ನು ಹುಲ್ಲೇ ಮನೆಯ ನಿವಾಸದಲ್ಲಿ ಅರಣ್ಯ ಅಧಿಕಾರಿಗಳು ವಶಕ್ಕೆ ಪಡೆದಿದ್ದರು.
ವ್ಯಕ್ತಿಯೊಬ್ಬರು ದೂರು ನೀಡಿದ ಆಧಾರದ ಮೇರೆಗೆ ರಾಜರಾಜೇಶ್ವರಿ ನಗರದ ಬಳಿ ರಿಯಾಲಿಟಿ ಶೋ ನಡೆಯುತ್ತಿದ್ದ ಬಿಗ್‌ಬಾಸ್ ಮನೆಗೆ ಭಾನುವಾರ ರಾತ್ರಿ ತೆರಳಿದ್ದ ಅರಣ್ಯಾಧಿಕಾರಿಗಳು ಸಂತೋಷ್ ಅವರನ್ನು ವಶಕ್ಕೆ ಪಡೆದಿದ್ದರು. ಸದ್ಯ ವರ್ತೂರು ಸಂತೋಷ್ನನ್ನು ಅರಣ್ಯಾಧಿಕಾರಿಗಳು ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಿದ್ದಾರೆ. ವರ್ತೂರು ಸಂತೋಷ್ ಬಂಧನದ ಬೆನ್ನಲ್ಲೇ ರಾಜ್ಯಾದ್ಯಂತ ಅರಣ್ಯ ಇಲಾಖೆ ಹುಲಿ ಉಗುರು ಧರಿಸಿದವರ ಮೇಲೆ ಕ್ರಮ ಕೈಗೊಳ್ಳಲು ಸಜ್ಜಾಗಿದೆ.













