ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಬಣಕಲ್, ಕೊಟ್ಟಿಗೆಹಾರ, ಬಾಳೂರು, ಚಕ್ಕಮಕ್ಕಿ, ಸೇರಿದಂತೆ ಹಲವೆಡೆ ಶನಿವಾರ ಮಧ್ಯಾಹ್ನ ಧಾರಾಕಾರ ಮಳೆಯಾಗಿದೆ.
ಇದನ್ನೂ ಓದಿ: SSLC ಪಾಸ್ ಆದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ತಿಂಗಳಿಗೆ ಸಿಗಲಿದೆ 3,500 ಸ್ಕಾಲರ್ ಶಿಪ್; ಈ ರೀತಿ ಅರ್ಜಿ ಸಲ್ಲಿಸಿ

ಕೊಟ್ಟಿಗೆಹಾರದಲ್ಲಿ 184 ಮಿ.ಮೀ ಮಳೆಯಾಗಿದೆ. ರಾತ್ರಿಯಿಡಿ ಮಳೆ ಸುರಿದಿದ್ದು, ಮಲೆನಾಡಿನಲ್ಲಿ ಮಂಜು ಕವಿದ ವಾತಾವರಣ ನಿರ್ಮಾಣವಾಗಿದೆ. ಮಳೆಯ ರಭಸಕ್ಕೆ ತರುವೆಯ ರೈತ ರಾಮ್ ಚಂದ್ರ ಎಂಬುವರ ತೋಟದ ಧರೆ ಕುಸಿದಿದೆ.

ಹಳ್ಳಕ್ಕೆ ಬಿದ್ದ ಕಾರು:
ಬಣಕಲ್- ಕೊಟ್ಟಿಗೆಹಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಸ್ವಿಪ್ಟ್ ಕಾರೊಂದು ಹೇಮಾವತಿ ಕಿರು ಹಳ್ಳಕ್ಕೆ ಬಿದ್ದಿದ್ದು, ಇಬ್ಬರು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇದನ್ನೂ ಓದಿ: ದ್ವಿತೀಯ ಪಿಯುಸಿ ಪಾಸ್ ಆದ ವಿದ್ಯಾರ್ಥಿಗಳಿಗೆ ತಿಂಗಳಿಗೆ ಸಿಗಲಿದೆ 6000 ಸ್ಕಾಲರ್ ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
ಅದೇ ಸ್ಥಳದಲ್ಲಿ ಶನಿವಾರ ಆಲ್ಟೊ ಕಾರೊಂದು ಹಳ್ಳಕ್ಕೆ ಬಿದ್ದಿದೆ. ಅವೈಜ್ಞಾನಿಕ ರಸ್ತೆ ಕಾಮಗಾರಿಯಿಂದ ಈ ರಸ್ತೆಯಲ್ಲಿ ನೀರು ನಿಂತು ವಾಹನಗಳು ನಿಯಂತ್ರಣ ತಪ್ಪಿ ಹಳ್ಳಕ್ಕೆ ಬೀಳುತ್ತಿದ್ದು, ಸಂಬಂಧಿಸಿದ ಅಧಿಕಾರಿಗಳು ಸೂಕ್ತ ಗಮನ ಹರಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. (ವರದಿ- ತನು ಕೊಟ್ಟಿಗೆಹಾರ)
ಕಡೂರು: ಮಹಾಮಾರಿ ಡೆಂಗ್ಯೂಗೆ ಆರು ವರ್ಷದ ಬಾಲಕಿ ಬಲಿ
ಕಡೂರು: (ನ್ಯೂಸ್ ಮಲ್ನಾಡ್ ವರದಿ) ಡೆಂಗ್ಯೂ ಜ್ವರಕ್ಕೆ ಆರು ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ನಡೆದಿದೆ. ಸಾನಿಯಾ (6) ಮೃತ ಬಾಲಕಿ.
ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಸಾನಿಯಾ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ.
ರಾಜ್ಯ ಸರ್ಕಾರದ ವಿರುದ್ಧ ಮೃತ ಬಾಲಕಿ ತಂದೆ ಬೇಸರ:
ಮಗಳ ಮೃತ ದೇಹದ ಮುಂದೆ ನಿಂತು ರಾಜ್ಯ ಸರ್ಕಾರದ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ. ನನಗೆ ಯಾವುದೇ ಸಹಾಯ ಬೇಡ, ಸರ್ಕಾರಿ ಆಸ್ಪತ್ರೆ ಅಭಿವೃದ್ಧಿ ಮಾಡಿ. ಇಲ್ಲವಾದರೆ ಸರ್ಕಾರಕ್ಕೆ ಜನ ಛೀಮಾರಿ ಹಾಕುತ್ತಾರೆ. ಡೆಂಗ್ಯೂ ಕಾಯಿಲೆಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಸೂಕ್ತ ಚಿಕಿತ್ಸೆ ಸಿಕ್ತಿಲ್ಲ. ಸರ್ಕಾರಿ ಆಸ್ಪತ್ರೆಯಲ್ಲಿ ಬಡವರಿಗೆ ಹೆಚ್ಚಿನ ಸೌಲಭ್ಯ ಸಿಗಬೇಕು. ನನ್ನ ಮಗಳಿಗಾದ ಸ್ಥಿತಿ ಯಾರಿಗೂ ಆಗುವುದು ಬೇಡ ಎಂದು ಮೃತ ಬಾಲಕಿಯ ತಂದೆ ಆಸಿಫ್ ಸರ್ಕಾರಿ ಆಸ್ಪತ್ರೆಗಳ ನಿರ್ಲಕ್ಷಕ್ಕೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.












