ಮೂಡಿಗೆರೆ: ಲವ್ ಜಿಹಾದ್ – ಎರಡು ಪ್ರತ್ಯೇಕ ಎಫ್‌ಐಆರ್ ದಾಖಲು

ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಪಟ್ಟಣದಲ್ಲಿ ಅಪ್ರಾಪ್ತ ಯುವಕ–ಯುವತಿಯರ ಪ್ರೇಮ ಸಂಬಂಧದ ವಿಚಾರವಾಗಿ ಪೊಲೀಸರು ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿದ್ದಾರೆ.


ಇದನ್ನೂ ಓದಿ: ಆಸ್ತಿ ನೋಂದಣಿ ನಿಯಮಗಳಲ್ಲಿ ಮಹತ್ವದ ಬದಲಾವಣೆ; ಇನ್ಮುಂದೆ ಆಸ್ತಿ ರಿಜಿಸ್ಟ್ರೇಷನ್ ಗೆ ಈ ದಾಖಲೆಗಳು ಕಡ್ಡಾಯ!


ಪಿಯುಸಿ ವ್ಯಾಸಂಗ ಮಾಡುತ್ತಿರುವ ಮುಸ್ಲಿಂ ಸಮುದಾಯದ ಅಪ್ರಾಪ್ತ ಯುವಕ ಹಾಗೂ ಹತ್ತನೇ ತರಗತಿ ಓದುತ್ತಿರುವ ಹಿಂದೂ ಸಮುದಾಯದ ಅಪ್ರಾಪ್ತ ಬಾಲಕಿ ಪರಸ್ಪರ ಪ್ರೀತಿಸುತ್ತಿದ್ದರು ಎಂಬ ಮಾಹಿತಿ ಮೇಲ್ನೋಟಕ್ಕೆ ತಿಳಿದುಬಂದಿದೆ. ವಿಷಯ ತಿಳಿದ ಹಿಂದೂ ಸಂಘಟನೆ ಕಾರ್ಯಕರ್ತರು ಯುವಕನ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಯುವಕ ನೀಡಿದ ದೂರಿನ ಮೇರೆಗೆ ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಮೂವರು ಹಿಂದೂ ಸಂಘಟನೆ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಘಟನೆಯ ಬಳಿಕ ಬಾಲಕಿಯ ತಂದೆಯೂ ಪೊಲೀಸ್ ಠಾಣೆಗೆ ದೂರು ನೀಡಿದ್ದು, ತನ್ನ ಮಗಳೊಂದಿಗೆ ಯುವಕನು ಅನೂಚಿತವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಿದ್ದಾರೆ. ಎರಡೂ ಕಡೆಗಳಿಂದ ಬಂದ ದೂರಿನ ಹಿನ್ನಲೆಯಲ್ಲಿ ಪೊಲೀಸರು FIR ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.


ಇದನ್ನೂ ಓದಿ: 6 ರಾಶಿಗೆ ಪ್ರಗತಿಯ ಹಾದಿ ತೆರೆಯಲಿದೆ.. ಭರ್ಜರಿ ಲಕ್‌!


 

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.