ಮೂಡಿಗೆರೆ: ಅಕ್ರಮ ಲವ್ ಜಿಹಾದ್, ಗೋ ಕಳ್ಳತನ ವಿರೋಧಿಸಿ ಉಗ್ರ ಹೋರಾಟ

ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಅಕ್ರಮ ಲವ್ ಜಿಹಾದ್, ಅಕ್ರಮ ಗೋ ಕಳ್ಳತನ ಹಾಗೂ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ತೀವ್ರವಾಗಿ ಖಂಡಿಸಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ಮತ್ತು ಬಿಜೆಪಿ ಕಾರ್ಯಕರ್ತರು ಸೋಮವಾರ ಮೂಡಿಗೆರೆ ಪಟ್ಟಣದಲ್ಲಿ ಉಗ್ರ ಪ್ರತಿಭಟನೆ ನಡೆಸಿದರು.

ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದ ಕಾರ್ಯಕರ್ತರು ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶ ಹೊರಹಾಕಿದರು. ಬಳಿಕ ತಹಸೀಲ್ದಾರ್ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

ಬಿಜೆಪಿ ತಾಲೂಕು ಅಧ್ಯಕ್ಷ ಗಜೇಂದ್ರ ಕೊಟ್ಟಿಗೆಹಾರ ಮಾತನಾಡಿ, ರಾಜ್ಯದಲ್ಲಿ ಅಕ್ರಮ ಚಟುವಟಿಕೆಗಳು ನಿರಂತರವಾಗಿ ನಡೆಯುತ್ತಿದ್ದು, ಸರ್ಕಾರ ಇದನ್ನು ನಿಯಂತ್ರಿಸಲು ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದರು. ತಕ್ಷಣ ಕಠಿಣ ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ವಿಶ್ವ ಹಿಂದೂ ಪರಿಷತ್ ಮೂಡಿಗೆರೆ ತಾಲೂಕು ಅಧ್ಯಕ್ಷ ಗುತ್ತಿ ಸುದೇವ್ ಮಾತನಾಡಿ, ಅಕ್ರಮ ಗೋ ಕಳ್ಳತನ ಹಾಗೂ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ತೀವ್ರವಾಗಿ ಖಂಡಿಸಿ, ಹಿಂದೂಗಳ ಸಹನೆ ಪರೀಕ್ಷಿಸುವಂತಹ ಘಟನೆಗಳು ಮರುಕಳಿಸಬಾರದು ಎಂದು ಹೇಳಿದರು. ಇಂತಹ ಅಕ್ರಮಗಳಿಗೆ ಕಟ್ಟುನಿಟ್ಟಿನ ತಡೆ ಒಡ್ಡಬೇಕು ಎಂದು ಸರ್ಕಾರವನ್ನು ಆಗ್ರಹಿಸಿದರು.

ಮೂಡಿಗೆರೆ ತಾಲೂಕಿನ ಎಲ್ಲಾ ಹೋಬಳಿಗಳ ಮುಖಂಡರುಗಳು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿ ಏಕತಾ ಪ್ರದರ್ಶಿಸಿದರು. ಬಿಜೆಪಿ, ವಿಶ್ವ ಹಿಂದೂ ಪರಿಷತ್, ಬಜರಂಗದಳ ಸೇರಿದಂತೆ ವಿವಿಧ ಸಂಘಟನೆಗಳ ಎಲ್ಲಾ ಮುಖಂಡರುಗಳು ಹಾಗೂ ಕಾರ್ಯಕರ್ತರು ಸಕ್ರಿಯವಾಗಿ ಪಾಲ್ಗೊಂಡು ಪ್ರತಿಭಟನೆಗೆ ಬಲ ತುಂಬಿದರು. ( ವರದಿ- ತನು ಕೊಟ್ಟಿಗೆಹಾರ)

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.